ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

'ಆಯುಷ್ಮಾನ್ ಭಾರತ್' ನೀಡಿದ್ದಕ್ಕೆ ಪ್ರಧಾನಿ ಮೋದಿಗೆ 2019ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರ?

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ತಮಿಳುನಾಡಿನ ಬಿಜೆಪಿ ಅಧ್ಯಕ್ಷೆ ತಮಿಳಿಸೈ ಸೌಂದರರಾಜನ್ ಅವರು, 2019ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಸೂಚಿಸಿದ್ದಾರೆ...

ಚೆನ್ನೈ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ತಮಿಳುನಾಡಿನ ಬಿಜೆಪಿ ಅಧ್ಯಕ್ಷೆ ತಮಿಳಿಸೈ ಸೌಂದರರಾಜನ್ ಅವರು, 2019ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಸೂಚಿಸಿದ್ದಾರೆ. 
ವಿಶ್ವದ ಅತೀ ದೊಡ್ಡ ಆರೋಗ್ಯ ವಿಮೆ 'ಆಯುಷ್ಮಾನ್ ಭಾರತ್' ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕೆ ಸೂಚಿಸುರುವುದಾಗಿ ತಮಿಳಿಸೈ ಅವರು ಹೇಳಿದ್ದಾರೆ. 
ನೊಬೆಲ್ ಶಾಂತಿ ಪುರಸ್ಕಾರಕ್ಕೆ ಮೋದಿಯವರ ಹೆಸರನ್ನು ಶಿಫಾರಸ್ಸು ಮಾಡಲು ತಮ್ಮೊಂದಿಗೆ ಕೈ ಜೋಡಿಸಬೇಕೆಂದು ಜನರ ಬಳಿ ಮನವಿ ಮಾಡಿಕೊಂಡಿದ್ದಾರೆ. 
ಮೋದಿಯವರ ದೂರದೃಷ್ಟಿಯ ಆಯುಷ್ಮಾನ್ ಭಾರತ ಯೋಜನೆಯು ಕೋಟ್ಯಾಂತರ ಬಡವರ ಬದುಕಿನ ಆಶಾಕಿರಣವಾಗಲಿದೆ. ಇದು ಹಲವರ ಬದುಕನ್ನು ಬದಲಿಸಿದೆ ಎಂದು ತಿಳಿಸಿದ್ದಾರೆ. 
ತಮಿಳಿಸೈ ಸೌಂದರರಾಜನ್ ಪತಿ ಡಾ.ಪಿ. ಸೌಂದರರಾಜನ್ ಅವರು ಖಾಸಗಿ ವಿಶ್ವವಿದ್ಯಾಲಯದಲ್ಲಿ ಪ್ರೊಪೆಸರ್ ಆಗಿದ್ದು, ಅವರೂ ಕೂಡ ನೊಬೆಲ್ ಪುರಸ್ಕಾರಕ್ಕಾಗಿ ಮೋದಿಯವರ ಹೆಸರನ್ನು ಸೂಚಿಸಿದ್ದಾರೆಂದು ತಿಳಿದುಬಂದಿದೆ. 
2019ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಹೆಸರನ್ನು ಸೂಚಿಸಲು ಜನವರಿ. 31, 2019 ಕೊನೆಯ ದಿನವಾಗಿದ್ದು, ಸೆಪ್ಟೆಂಬರ್ ನಲ್ಲಿ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT