ನರೇಂದ್ರ ಮೋದಿ-ರಮ್ಯಾ 
ದೇಶ

ಪ್ರಧಾನಿ ಮೋದಿಯನ್ನು ಟೀಕಿಸುವ ಭರದಲ್ಲಿ 'ಕಳ್ಳ' ಎಂದು ಟ್ವೀಟ್ ಮಾಡಿದ್ದ ರಮ್ಯಾ ಮೇಲೆ ಬಿತ್ತು ಕೇಸ್!

ಪ್ರಧಾನಿ ನರೇಂದ್ರ ಮೋದಿಯನ್ನು ಅವರನ್ನು ಟೀಕಿಸುವ ಭರದಲ್ಲಿ ನಿಂದನಾತ್ಮಕ ಫೋಟೋಗಳನ್ನು ಹಾಕಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಉತ್ತರಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ...

ಲಖನೌ: ಪ್ರಧಾನಿ ನರೇಂದ್ರ ಮೋದಿಯನ್ನು ಅವರನ್ನು ಟೀಕಿಸುವ ಭರದಲ್ಲಿ ನಿಂದನಾತ್ಮಕ ಫೋಟೋಗಳನ್ನು ಹಾಕಿದ್ದ ಮಾಜಿ ಸಂಸದೆ ರಮ್ಯಾ ವಿರುದ್ಧ ಉತ್ತರಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 
ರಫೇಲ್ ಒಪ್ಪಂದ ವಿವಾದಕ್ಕೆ ಸಂಬಂಧಿಸಿ ರಮ್ಯಾ ಪ್ರಧಾನಿ ಮೋದಿ ಅವರನ್ನು ಟೀಕಿಸಿ ರಮ್ಯಾ ಮಾಡಿದ ಟ್ವೀಟ್ ಗೆ ಸಂಬಂಧಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 
ಲಖನೌ ಮೂಲದ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸೈಯದ್ ರಿಜ್ವಾನ್ ಅಹ್ಮದ್ ಉತ್ತರ ಪ್ರದೇಶದ ಗೋಮತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  ಈ ದೂರಿನನ್ವಯ ಗೋಮತಿನಗರ ಪೊಲೀಸರು ರಮ್ಯಾ ವಿರುದ್ಧ ಸೆಕ್ಷನ್ 67 ಮಾಹಿತಿ ತಂತ್ರಜ್ಞಾನ ತಿದ್ದುಪಡಿ ಕಾಯ್ದೆ, 2008 ಮತ್ತು ಸೆಕ್ಷನ್ 124ಎ ಅಡಿ ಎಫ್ಐಆರ್ ದಾಖಲಿಸಿದ್ದಾರೆ. 
ಸೈಯದ್ ರಿಜ್ವಾನ್ ತಮ್ಮ ದೂರಿನಲ್ಲಿ ರಮ್ಯಾ ಅವರ ಪೋಸ್ಟ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ದ್ವೇಷ ಕಾರುವ ಅಂಶವಿದೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)