ಕಮಲ್ ಹಾಸನ್ 
ದೇಶ

ಒಡಿಶಾ ಸಿಎಂ ಪಾಟ್ನಾಯಕ್ ಭೇಟಿ ಮಾಡಿ ಸಲಹೆ ಪಡೆದ ಕಮಲ್ ಹಾಸನ್

ಮಕ್ಕಳ್ ನೀಧಿ ಮೈಯಂ(ಎಂಎನ್ಎಂ) ಪಕ್ಷದ ಮುಖ್ಯಸ್ಥ, ನಟ ಕಮಲ್ ಹಾಸನ್ ಅವರು ಬುಧವರಾ ಒಡಿಶಾ....

ಚೆನ್ನೈ: ಮಕ್ಕಳ್ ನೀಧಿ ಮೈಯಂ(ಎಂಎನ್ಎಂ) ಪಕ್ಷದ ಮುಖ್ಯಸ್ಥ, ನಟ ಕಮಲ್ ಹಾಸನ್ ಅವರು ಬುಧವರಾ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿ, ಸಲಹೆ ಪಡೆದಿದ್ದಾರೆ.
ಇಂದು ಅಧಿಕೃತ ಕಾರ್ಯಕ್ರಮದ ನಿಮಿತ್ತ ಚೆನ್ನೈಗೆ ಆಗಮಿಸಿರುವ ಒಡಿಶಾ ಸಿಎಂ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಹಾಸನ್ ಅವರು, ಒಬ್ಬ ಅಭಿಮಾನಿಯಾಗಿ ಬಿಜೆಡಿ ಹಿರಿಯ ನಾಯಕ ನವೀನ್ ಪಟ್ನಾಯಕ್ ಅವರನ್ನು ಭೇಟಿ ಮಾಡಿದೆ ಮತ್ತು ಅವರಿಂದ ಸಲಹೆಗಳನ್ನು ಪಡೆದುಕೊಂಡೆ ಎಂದರು.
ಪಾಟ್ನಾಯಕ್ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಅವರು ಸಹ ರಾಜಕೀಯಕ್ಕೆ ಬಂದಾಗ ಆರಂಭದಲ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸಿದ್ದರು. ಆದರೆ ಈಗ ನಿರೀಕ್ಷೆಗೂ ಮೀರಿ ಸಾಧನೆ ಮಾಡಿದ್ದಾರೆ ಎಂದು ಕಮಲ್ ಹಾಸನ್ ಒಡಿಶಾ ಸಿಎಂ ಅನ್ನು ಹಾಡಿ ಹೊಗಳಿದ್ದಾರೆ.
ಪಾಟ್ನಾಯಕ್ ಅವರು ಜನತೆಗೆ ಉತ್ತಮ ಯೋಜನೆಗಳನ್ನು ನೀಡುತ್ತಿದ್ದಾರೆ. ಅವರ ವಿಪತ್ತು ನಿರ್ಹವಣೆ ಅತ್ಯುತ್ತಮವಾಗಿದೆ. ಅವರಿಂದ ನಾವು ಕಲಿಯಬೇಕಾದದ್ದು ಬಹಳಷ್ಟಿದೆ ಎಂದು ಕಮಲ್ ಹಾಸನ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ