ಮಹಿಳೆಯನ್ನು ಜೀಪ್ ಮೇಲೆ ಮಲಗಿಸಿರುವುದು 
ದೇಶ

ಮಹಿಳೆಯನ್ನು ಜೀಪ್ ಮೇಲೆ ಮಲಗಿಸಿ, ಪಟ್ಟಣ ಸುತ್ತಿಸಿದ ಪಂಜಾಬ್ ಪೊಲೀಸರು!

ಪಂಜಾಬ್ ಪೊಲೀಸರು ಮಧ್ಯ ವಯಸ್ಕ ಮಹಿಳೆಯೊಬ್ಬರನ್ನು ಜೀಪ್ ಮೇಲೆ ಮಲಗಿಸಿ, ಪಟ್ಟಣ...

ಅಮೃತಸರ: ಪಂಜಾಬ್ ಪೊಲೀಸರು ಮಧ್ಯ ವಯಸ್ಕ ಮಹಿಳೆಯೊಬ್ಬರನ್ನು ಜೀಪ್ ಮೇಲೆ ಮಲಗಿಸಿ,  ಪಟ್ಟಣ ಸುತ್ತಿಸಿದ ಆಘಾತಕಾರಿ ಘಟನೆ ಅಮೃತಸರದಲ್ಲಿ ನಡೆದಿದೆ.
ಪಂಜಾಬ್ ಅಪರಾಧ ವಿಭಾಗದ ಪೊಲೀಸರು, ಪತಿಯನ್ನು ವಿಚಾರಣೆಗೆ ಕರೆದೊಯ್ಯಲು ವಿರೋಧ ವ್ಯಕ್ತಪಡಿಸಿದ ಮಹಿಳೆಯನ್ನು ಬಲವಂತವಾಗಿ ಜೀಪ್ ಮೇಲೆ ಮಲಗಿಸಿ, ವೇಗವಾಗಿ ವಾಹನ ಚಲಾಯಿಸಿದ್ದಾರೆ. ಈ ವೇಳೆ ಮಹಿಳೆ ಜೀಪ್ ನಿಂದ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರವಾಗಿ ಗಾಯವಾಗಿದೆ. ಪೊಲೀಸರ ಈ ಅಮಾನವೀಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಜೀಪ್ ಮೇಲಿಂದ ಬಿದ್ದು ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪೊಲೀಸರು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯ ಮಾವನನ್ನು ವಿಚಾರಣೆಗೆ ಒಳಪಡಿಸಲು ಚವಿಂಡಾ ದೇವಿ ಪ್ರದೇಶದಲ್ಲಿರುವ ಮಹಿಳೆಯ ಮನೆಗೆ ತೆರಳಿದ್ದರು. ಈ ವೇಳೆ ಮಾವ ಮನೆಯಲ್ಲಿ ಇರಲಿಲ್ಲ. ಹೀಗಾಗಿ ವಿಚಾರಣೆಗಾಗಿ ಮಹಿಳೆಯ ಪತಿಯನ್ನು ಕರೆದೊಯ್ಯಲು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಪಡಿಸಿದ ಮಹಿಳೆಗೆ ಪೊಲೀಸರು ಈ ರೀತಿ ಅಮಾನವೀಯ ಶಿಕ್ಷೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!