ಸುಪ್ರೀಂ ಕೋರ್ಟ್ 
ದೇಶ

ಮಸೀದಿ ಇಸ್ಲಾಮ್ ನ ಅವಿಭಾಜ್ಯ ಅಂಗವಲ್ಲ: 1994ರ ತೀರ್ಪು ಎತ್ತಿ ಹಿಡಿದ 'ಸುಪ್ರೀಂ', ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆ ಇಲ್ಲ

ಮಸೀದಿ ಇಸ್ಲಾಮ್ ನ ಅವಿಭಾಜ್ಯ ಅಂಗವಲ್ಲ ಎಂಬ 1994 ರ ಫಾರೂಕಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ಎತ್ತಿ ಹಿಡಿದಿದೆ.

ನವದೆಹಲಿ: ಮಸೀದಿ ಇಸ್ಲಾಮ್ ನ ಅವಿಭಾಜ್ಯ ಅಂಗವಲ್ಲ ಎಂಬ 1994 ರ ಫಾರೂಕಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ಎತ್ತಿ ಹಿಡಿದಿದೆ. 
ಮಸೀದಿಯು ಇಸ್ಲಾಮ್ ನ ಅವಿಭಾಜ್ಯ ಅಂಗವಾಗಿಲ್ಲ ಎಂದಿದ್ದ ಇಸ್ಮಾಯಿಲ್ ಫಾರೂಕಿ ತೀರ್ಪಿನ ಪರಿಶೀಲನೆ ಸಂಬಂಧ ಸೆ.27 ರಂದು ಮಹತ್ವದ ತೀರ್ಪು ಪ್ರಕಟಿಸಿರುವ ಮುಖ್ಯ ನ್ಯಾ. ದೀಪಕ್ ಮಿಶ್ರ, ಅಶೋಕ್ ಭೂಷನ್, ನ್ಯಾ. ನಜೀರ್ ಅವರಿದ್ದ ತ್ರಿಸದಸ್ಯ ಪೀಠದ ಪೈಕಿ ನ್ಯಾ. ಅಶೋಕ್ ಭೂಷಣ್ ಹಾಗೂ ನ್ಯಾ. ದೀಪಕ್ ಮಿಶ್ರಾ  ಮಸೀದಿಯು ಇಸ್ಲಾಮ್ ನ ಅವಿಭಾಜ್ಯ ಅಂಗವಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದು, 1994 ರ ಫಾರೂಕಿ ಪ್ರಕರಣದ ತೀರ್ಪನ್ನೇ ಎತ್ತಿ ಹಿಡಿದೆ. ಅಷ್ಟೇ ಅಲ್ಲದೇ  1994 ರ ಪ್ರಕರಣದ ತೀರ್ಪಿನ ಅಂಶಗಳನ್ನು ಪರಿಶೀಲಿಸಲು ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
ಇದೇ ವೇಳೆ ಯಾವುದೇ ಧರ್ಮದ ಸ್ಥಳಗಳನ್ನು ಸರ್ಕಾರಗಳು ವಶಕ್ಕೆ ಪಡೆಯಬಹುದು ಎಂಬುದನ್ನೂ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠದ ನ್ಯಾಯಮೂರ್ತಿಗಳು ಹೇಳಿದ್ದಾರೆ. 
ಇದೇ ವೇಳೆ ಫಾರೂಕಿ ಪ್ರಕರಣದ ತೀರ್ಪನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕೆಂದು ನ್ಯಾ.ನಜೀರ್ ಅಭಿಪ್ರಾಯಪಟ್ಟಿದ್ದು, ತೀರ್ಪಿನ ಸಂಬಂಧ ಇನ್ನಿಬ್ಬರು ಸಹೋದ್ಯೋಗಿ ನ್ಯಾಯಮೂರ್ತಿಗಳ ಅಭಿಪ್ರಾಯಕ್ಕೆ ನನ್ನ ಸಹಮತ ಇಲ್ಲ, ಮಸೀದಿ ಇಸ್ಲಾಂ ನ ಅವಿಭಾಜ್ಯ ಅಂಗವೇ ಎಂಬ ವಿಷಯವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT