ಶ್ರೀನಗರ: ಜಮ್ಮು ಕಾಶ್ಮೀರದ ಬಾರಮುಲ್ಲಾದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಪೋರ್ ನ ಬೊಮಾಯ್ ಪ್ರದೇಶದಲ್ಲಿ ಉಗ್ರರು ಅವಿತು ಕುಳಿತಿದ್ದಾರೆ ಎಂಬ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದರು.
ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದರು, ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಪಡೆ ದಾಳಿ ನಡೆಸಿ ಇಬ್ಬರನ್ನು ಹೊಡೆದುರುಳಿಸಿದೆ, ಇನ್ನೂ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಮೃತ ಉಗ್ರರು ಸ್ಲೈನ್ ಅಲ್ಟ್ರಾಸ್ ಭಯೋತ್ಪಾದಕರ ಗುಂಪಿಗೆ ಸೇರಿದವರು ಎಂದು ಹೇಳಲಾಗಿದೆ.