ಹಕ್ಕುಗಳ ಹೋರಾಟಗಾರರ ಬಂಧನದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಕಾರ: ರೋಮಿಲಾ ಥಾಪರ್ ಗೆ ಹಿನ್ನೆಡೆ 
ದೇಶ

ಹಕ್ಕುಗಳ ಹೋರಾಟಗಾರರ ಬಂಧನದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಕಾರ: ರೋಮಿಲಾ ಥಾಪರ್ ಗೆ ಹಿನ್ನೆಡೆ

ಭೀಮಾ ಕೊರೆಗಾಂವ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂಬಂತೆ ಸಾಮಾಜಿಕ ಹೋರಾಟಗಾರರ ಬಂಧನದ ವಿಷಯವಾಗಿ ಮಧ್ಯಪ್ರವೇಶಿಸುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನವದೆಹಲಿ: ಭೀಮಾ ಕೊರೆಗಾಂವ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂಬಂತೆ ಸಾಮಾಜಿಕ ಹೋರಾಟಗಾರರ ಬಂಧನದ ವಿಷಯವಾಗಿ ಮಧ್ಯಪ್ರವೇಶಿಸುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. 
ವರವರ ರಾವ್ ಸೇರಿದಂತೆ ಒಟ್ಟು 5 ಸಾಮಾಜಿಕ ಹೋರಾಟಗಾರರು ಬಂಧನಕ್ಕೊಳಗಾಗಿರುವುದನ್ನು ರೋಮಿಲಾ ಥಾಪರ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.ಈ ಬಗ್ಗೆ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಬಂಧನದ ವಿಷಯವಾಗಿ ಮಧ್ಯಪ್ರವೇಶಿಸುವುದಕ್ಕೆ ನಿರಾಕರಿಸಿದೆ.
ಭಿನ್ನ ಅಭಿಪ್ರಾಯ ಹೊಂದಿರುವ ಸಾಮಾಜಿಕ ಕಾರ್ಯಕರ್ತರು ಎಂಬ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿಲ್ಲ. ಬದಲಾಗಿ ಮೇಲ್ನೋಟಕ್ಕೆ ಅವರು ನಿಷೇಧಿತ ಸಿಪಿಐ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದರ ಬಗ್ಗೆ ಕೆಲವು ಸಾಕ್ಷ್ಯಗಳಿದ್ದವು ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ನ ನ್ಯಾ. ಖನ್ವಾಲಿಕರ್  ಹೇಳಿದ್ದಾರೆ. 
ಬಂಧನದ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದು ಸಾಧ್ಯವಿಲ್ಲ ಎಂದು  ಸುಪ್ರೀಂ ಕೋರ್ಟ್ ಹೇಳಿರುವುದರಿಂದ ಇನ್ನೂ ನಾಲ್ಕು ವಾರ ಸಾಮಾಜಿಕ ಕಾರ್ಯಕರ್ತರ ಗೃಹ ಬಂಧನ ಮುಂದುವರೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT