ಸಂಗ್ರಹ ಚಿತ್ರ 
ದೇಶ

ಎನ್ ಕೌಂಟರ್ ಅಲ್ಲ, ಘಟನೆ ಸಂಬಂಧ ಸಿಬಿಐ ತನಿಖೆಗೆ ಆದೇಶಿಸಲಾಗುತ್ತದೆ: ಸಿಎಂ ಯೋಗಿ ಆದಿತ್ಯಾನಾಥ್

ಆ್ಯಪಲ್ ಉದ್ಯೋಗಿಯ ಮೇಲಿನ ಪೊಲೀಸರ ಗುಂಡಿನ ದಾಳಿ ಎನ್ ಕೌಂಟರ್ ಅಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.

ಲಖನೌ: ಆ್ಯಪಲ್ ಉದ್ಯೋಗಿಯ ಮೇಲಿನ ಪೊಲೀಸರ ಗುಂಡಿನ ದಾಳಿ ಎನ್ ಕೌಂಟರ್ ಅಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.
ಸೂಚನೆ ನೀಡಿದರೂ ಕಾರು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೇ ಪೊಲೀಸ್ ಪೇದೆಯೋರ್ವ ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿದ್ದು, ಪರಿಣಾಮ ಆ್ಯಪಲ್ ಸಂಸ್ಥೆಯ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಈ  ಬಗ್ಗೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಯೋಗಿ ಆದಿತ್ಯಾನಾಥ್ ಅವರು, ಘಟನೆಗೆ ಸಂಬಂಧಿಸಿದಂತೆ ತಾವು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು ಇದು ಆಕಸ್ಮಿಕ ಘಟನೆಯೇ ಹೊರತು ಎನ್ ಕೌಂಟರ್ ಅಲ್ಲ. ಘಟನೆಗೆ ಸಂಬಂಧಿಸಿದಂತೆ ತಾವು ಸಿಬಿಐ ತನಿಖೆ ನಡೆಸಲು ನಿರ್ಧರಿಸಿದ್ದೇವೆ.
ಆರೋಪಿ ಪೇದೆ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಪೂರ್ಣ ಮಾಹಿತಿ ಸಿಕ್ಕ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.
ಇನ್ನು ನಿನ್ನೆ ತಡರಾತ್ರಿ ಲಖನೌನಲ್ಲಿ ಕಾರಿನಲ್ಲಿ ತೆರಳುತ್ತಿ ಆ್ಯಪಲ್ ಉದ್ಯೋಗಿ ವಿವೇಕ್ ತಿವಾರಿ ಪೊಲೀಸ್ ಪೇದೆಗಳಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬಳಿಕ ಪೊಲೀಸರು ಕಾರು ನಿಲ್ಲಿಸು ಎಂದು ಸೂಚನೆ ಕೊಟ್ಟರೂ ನಿಲ್ಲಿಸದೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದರು. ಇದರಿಂದ ಶಂಕೆಗೊಂಡು ಪೊಲೀಸ್ ಪೇದೆ ಅವರ ಕಾರಿನ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ವಿವೇಕ್ ತಿವಾರಿ ಕುತ್ತಿಗೆ ಬಳಿ ಗುಂಡು ತಗುಲಿದೆ. ಗುಂಡೇಟು ತಗುಲುತ್ತಿದ್ದಂತೆಯೇ ತಿವಾರಿ ಗಾಡಿ ಅಂಡರ್ ಪಾಸ್ ಗೋಡೆಗೆ ಢಿಕ್ಕಿ ಹೊಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದರು. 
ಈ ವಿಚಾರ ಇದೀಗ ಉತ್ತರ ಪ್ರದೇಶದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

IPL 2026: ಬೆಂಗಳೂರಿನಲ್ಲಿ ನಡೆಯುವ ಪಂದ್ಯಕ್ಕೆ ಶಾಸಕರಿಗೆ 4 ವಿಐಪಿ ಟಿಕೆಟ್ ಖಾತ್ರಿಗೆ ಸ್ಪೀಕರ್ ಯುಟಿ ಖಾದರ್ ನಿರ್ದೇಶನ!

Airbnb ಮೂಲಕ ಪೆಂಟ್‌ಹೌಸ್ ಬಾಡಿಗೆ ವಿವಾದ: ಜನರ ಮೇಲೆ ಕಾರು ಹತ್ತಿಸಿದ ತಂದೆ-ಮಗ; ಮಹಿಳಾ ಟೆಕ್ಕಿ ಸಾವು, ಭೀಕರ ದೃಶ್ಯ!

ಮುಡಾ ಪ್ರಕರಣ: ಮತ್ತೆ ಸಿಎಂ ಗೆ ಸಂಕಷ್ಟ, ಬಿ'ರಿಪೋರ್ಟ್ ಸಂಬಂಧ ಸಿದ್ದರಾಮಯ್ಯ, ಪತ್ನಿ ಗೆ ಹೈಕೋರ್ಟ್ ನೋಟಿಸ್ ಜಾರಿ

ನನ್ನ ಬಿಡಪ್ಪ, ನಿನಗೆ ತಾಕತ್ತಿದ್ದರೆ ಮೋದಿಗೆ ಥೂ ಅನ್ನು ನೋಡೋಣ: ಸುನೀಲ್ ಕುಮಾರ್‌ಗೆ ಸಿದ್ದರಾಮಯ್ಯ ಸವಾಲು, Video!

SCROLL FOR NEXT