ಹತ್ಯೆಯಾದ ಪೆಹ್ಲು ಖಾನ್ 
ದೇಶ

ಆಲ್ವಾರ್ ಹತ್ಯೆ: ಕೋರ್ಟ್ ಗೆ ತೆರಳುತ್ತಿದ್ದ ಪೆಹ್ಲು ಖಾನ್‌ ಪುತ್ರ, ಸಾಕ್ಷಿಗಳ ಮೇಲೆ ಗುಂಡಿನ ದಾಳಿ

ರಾಜಸ್ಥಾನದಲ್ಲಿ ಗೋರಕ್ಷಕರಿಂದ ಹತ್ಯೆಯಾದ ಹರ್ಯಾಣ ಮೂಲದ ಪೆಹ್ಲು ಖಾನ್‌ ಅವರ ಪುತ್ರ ಇರ್ಷಾದ್ ಹಾಗೂ...

ಜೈಪುರ: ರಾಜಸ್ಥಾನದಲ್ಲಿ ಗೋರಕ್ಷಕರಿಂದ ಹತ್ಯೆಯಾದ ಹರ್ಯಾಣ ಮೂಲದ ಪೆಹ್ಲು ಖಾನ್‌ ಅವರ ಪುತ್ರ ಇರ್ಷಾದ್ ಹಾಗೂ ಇತರೆ ಪ್ರಮುಖ ಸಾಕ್ಷಿಗಳ ಮೇಲೆ ದುಷ್ಕರ್ಮಿಗಳು ಶನಿವಾರ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೆಹ್ಲು ಖಾನ್ ಹತ್ಯೆ ಪ್ರಕರಣದಲ್ಲಿ ಇರ್ಷಾದ್ ಹಾಗೂ ಇತರರು ಪ್ರತ್ಯಕ್ಷದರ್ಶಿಗಳಾಗಿದ್ದು, ಇಂದು ರಾಜಸ್ಥಾನದ ಬೆಹ್ರೋಡ್ ಕೋರ್ಟ್ ಗೆ ವಿಚಾರಣೆಗೆ ತೆರಳುತ್ತಿದ್ದ ವೇಳೆ ಅವರ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. 
ಈ ಸಂಬಂಧ ಇರ್ಷಾದ್ ಅವರು ಅಲ್ವಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನನ್ನ ಕಾರಿನಿ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ದೂರಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ನಂಬರ್ ಪ್ಲೇಟ್ ಇಲ್ಲದ ಕಪ್ಪು ಬಣ್ಣದ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ನಮಗೆ ಕಾರು ನಿಲ್ಲಿಸುವಂತೆ ಕೇಳಿಕೊಂಡರು. ಆದರೆ ನಾವು ಕಾರು ನಿಲ್ಲಿಸದಿದ್ದಾಗ ನಮ್ಮ ಕಾರಿನ ಮೇಲೆ ಗುಂಡು ಹಾರಿಸಿದರು ಎಂದು ಇರ್ಷಾದ್ ಆರೋಪಿಸಿದ್ದಾರೆ.
ಪ್ರಕರಣದ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು ಮತ್ತು ಇರ್ಷಾದ್ ಅವರು ನೀಡಿದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುವುದು ಎಂದು ಆಲ್ವಾರ್ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಸಿಂಗ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ...

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: Instagramನಲ್ಲಿ 100 ಮಿ. ಫಾಲೋವರ್ಸ್ ದಾಟಿದ ಮೊದಲ ವಿಶ್ವ ನಾಯಕ

SCROLL FOR NEXT