ಸುಬ್ರಮಣ್ಯನ್ ಸ್ವಾಮಿ 
ದೇಶ

ನೇತಾಜಿಯನ್ನು ಕೊಂದದ್ದು ರಷ್ಯಾ ಮಾಜಿ ಅಧ್ಯಕ್ಷ ಸ್ಟಾಲಿನ್‌: ಸುಬ್ರಮಣ್ಯನ್ ಸ್ವಾಮಿ

ರಷ್ಯಾ ಮಾಜಿ ಅಧ್ಯಕ್ಷ ಜೋಸೆಫ್ ಸ್ಟಾಲಿನ್ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ವ್ಯವಸ್ಥಿತವಾಗಿ ಕೊಲೆ ಮಾಡಿಸಿದ್ದನು. ನೇತಾಜಿ 1945ರ ವಿಮಾನ ದುರಂತದಲ್ಲಿ ....

ಅಗರ್ತಲಾ: ರಷ್ಯಾ ಮಾಜಿ ಅಧ್ಯಕ್ಷ ಜೋಸೆಫ್ ಸ್ಟಾಲಿನ್ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ವ್ಯವಸ್ಥಿತವಾಗಿ ಕೊಲೆ ಮಾಡಿಸಿದ್ದನು. ನೇತಾಜಿ 1945ರ ವಿಮಾನ ದುರಂತದಲ್ಲಿ ಸಾವನ್ನಪ್ಪಿರಲಿಲ್ಲ ಎಂದು ಬಿಜೆಪಿ ಮುಖಂಡರಾದ ಸುಬ್ರಮಣ್ಯನ್ ಸ್ವಾಮಿ ಹೇಳಿದ್ದಾರೆ.
ಅಗರ್ತಲಾದಲ್ಲಿ ಸಂಸ್ಕೃತ್‌ ಗೌರವ ಸಂಘನೆ ಆಯೋಜಿಸಿದ್ದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು ಬೋಸ್ ತಾವು ಸೋವಿಯತ್ ರಾಷ್ಟ್ರದಲ್ಲಿ ರಕ್ಷಣೆ ಪಡೆದಿದ್ದು ಅವರು ಅಲ್ಲಿಯೇ ಹತ್ಯೆಗೀಡಾದರು ಎಂದರು.
"ಬೋಸ್ 1945 ರಲ್ಲಿ ಸಂಭವಿಸಿದ್ದ ವಿಮಾನ ಅಪಘಾತದಲ್ಲಿ ಮೃತರಾಗಲಿಲ್ಲ.ಅವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎನ್ನುವುದು ಸುಳ್ಳು. ಇದನ್ನು ಇದು ನೆಹರೂ ಮತ್ತು ಜಪಾನಿಯರು ಹುಟ್ಟು ಹಾಕಿದ್ದಾರೆ. ಸುಭಾಷ್ ಚಂದ್ರ ಬೋಸ್ ರಷ್ಯಾದಲ್ಲಿ ಆಶ್ರಯ ಬಯಸಿದ್ದರು,.ಕಮಿನಿಸ್ಟ್ ರಷ್ಯಾದಲ್ಲಿ ಬೋಸ್ ಇದ್ದದ್ದು ನೆಹರೂ ಅವರಿಗೆ ಸಹ ತಿಳಿದಿತ್ತು ಲ್ಲಿ ಅವರನ್ನು ರಷ್ಯಾದ ಮಾಜಿ ಅಧ್ಯಕ್ಷ ಜೋಸೆಫ್‌ ಸ್ಟಾಲಿನ್‌ ವ್ಯವಸ್ಥಿತ ರೀತಿಯಲ್ಲಿ ಹತ್ಯೆ ಮಾಡಿದ್ದಾನೆ" ಎಂದು ಸ್ವಾಮಿ ಹೇಳಿದ್ದಾರೆ.
75 ವರ್ಷಗಳ ಹಿಂದೆಯೇ ಸಿಂಗಾಪುರದಲ್ಲಿ ರೂಪುಗೊಂಡ ನೇತಾಜಿ ಸುಭಾಷ್ ಚಂದ್ರ ಬೋಸ್ ಆಜಾದ್ ಹಿಂದ್ ಸರ್ಕಾರದ ಕಾರಣ ಬ್ರಿಟಿಷ್ ವಸಾಹತುಶಾಹಿ ಆಡಳಿತಗಾರರು ಭಾರತಕ್ಕೆ ಸ್ವಾತಂತ್ರ್ಯ ನೀಡಿದರು  ಬ್ರಿಟಿಷ್ ಪ್ರಧಾನಮಂತ್ರಿ ಕ್ಲೆಮೆಂಟ್ ಆಟ್ಲೆ 1948 ರಲ್ಲಿ ಭಾರತಕ್ಕೆ ಭೇಟಿ ನೀಡಿದಾಗ "ಬ್ರಿಟೇಃಷ್ ವಸಾಹತುಷಾಹಿ ಜನರಿಗಿಂತ ದೊಡ್ಡ ಪ್ರಮಾಣದಲ್ಲಿದ್ದ ಭಾರತೀಯರೇನಾದರೂ ಶಸ್ತ್ರಾಸ್ತ್ರ ಹಿಡಿದು ಬ್ರಿಟೀಷರ ವಿರುದ್ಧ ಹೋರಾಡಿದರೆ ಆಗ ಅದು ಬ್ರಿಟೀಷರಿಗೆ ಮಾರಕವಾಗಲಿದೆ" ಎಂದು ಒಪ್ಪಿಕೊಂಡಿದ್ದರು ಎನ್ನುವುದಾಗಿ ಸ್ವಾಮಿ ಹೇಳಿದ್ದಾರೆ.
ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದಲ್ 370ನೇ ವಿಧಿಯನ್ನು ಭಾರತದ ರಾಷ್ಟ್ರಪತಿಗಳು ಮಾತ್ರವೇ ತಾವು ಅಧಿಸೂಚನೆಯೊಂದನ್ನು ಸೇರಿಸುವ ಮೂಲಕ ರದ್ದುಗೊಳಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel