ಕಾಂಗ್ರೆಸ್ ಪಕ್ಷಕ್ಕೆ ಸೇರಿದ 687 ಪೇಜ್, ಖಾತೆಗಳು ಡಿಲೀಟ್: ಫೇಸ್ ಬುಕ್
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗೆ ಸಾಮಾಜಿಕ ಜಾಲತಾಣ ದೈತ್ಯ ಫೇಸ್ ಬುಕ್ ಶಾಕ್ ನೀಡಿದೆ.
ನವದೆಹಲಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗೆ ಸಾಮಾಜಿಕ ಜಾಲತಾಣ ದೈತ್ಯ ಫೇಸ್ ಬುಕ್ ಶಾಕ್ ನೀಡಿದೆ.
ಕಾಂಗ್ರೆಸ್ ನ ಐಟಿ ಸೆಲ್ ನೊಂದಿಗೆ ಗುರುತಿಸಿಕೊಂಡಿದ್ದ ಬರೊಬ್ಬರಿ 687 ಪೇಜ್ ಹಾಗೂ ಖಾತೆಗಳನ್ನು ತೆಗೆದು ಹಾಕಿರುವುದಾಗಿ ಫೇಸ್ ಬುಕ್ ಏ.1 ರಂದು ಘೋಷಿಸಿದೆ.
ನಕಲಿ ಫೇಸ್ ಬುಕ್ ಖಾತೆಗಳ ವಿರುದ್ಧ ಈಗಾಗಲೇ ಸಂಸ್ಥೆ ಸಮರ ಸಾರಿದ್ದು, ಇಂತಹ ಹಲವು ಖಾತೆಗಳನ್ನು ಫೇಸ್ ಬುಕ್ ಡಿಲೀಟ್ ಮಾಡುತ್ತಿದೆ. ಕಾಂಗ್ರೆಸ್ ನೊಂದಿಗೆ ಗುರುತಿಸಿಕೊಂಡಿದ್ದ 687 ಖಾತೆಗಳು ಪೇಜ್ ಗಳು ನಕಲಿಯಾಗಿದ್ದರಿಂದ ಅವುಗಳನ್ನು ತೆಗೆದುಹಾಕಲಾಗಿದೆ.
ಇದಷ್ಟೇ ಅಲ್ಲದೇ ಪಾಕಿಸ್ತಾನ ಮೂಲದ 103 ಪೇಜ್ ಹಾಗೂ ಗ್ರೂಪ್ ಗಳನ್ನು ಫೇಸ್ ಬುಕ್ ಹಾಗೂ ಇನ್ಸ್ಟಾ ಗ್ರಾಮ್ ನಿಂದ ತೆಗೆದುಹಾಕಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.