ದೇಶ

ಪುಲ್ವಾಮ ಕಾರ್ಯಾಚರಣೆಯಲ್ಲಿ ನಾಲ್ಕು ಉಗ್ರರ ಹತ್ಯೆ: ಮೂವರು ಭದ್ರತಾ ಸಿಬ್ಬಂದಿಗೆ ಗಾಯ

Shilpa D
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಸಿಬ್ಬಂದಿ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ  ನಾಲ್ಕು ಮಂದಿ ಉಗ್ರರು ಬಲಿಯಾಗಿದ್ದಾರೆ,
ಪುಲ್ವಾಮಾದ ಲಸ್ಸಿಪೋರಾದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ  ಬೆಳಗಿನ ಜಾವ ಶೋಧ ಕಾರ್ಯಾಚಪರಣೆ ನಡೆಸಿದೆ, ಈ ಕಾರ್ಯಾಚರಣೆ ವೇಳೆ ಮೂವರು ಭದ್ರತಾ ಸಿಬ್ಬಂದಿ ಗಾಯೊಗೊಂಡಿದ್ದಾರೆ. ಭದ್ರತಾ ಸಿಬ್ಬಂದಿ ಗುಂಡಿಗೆ ಬಲಿಯಾದವರು ಲಷ್ಕರ್ ಎ ತಯ್ಬಾ ಉಗ್ರರು ಎಂದು ಹೇಳಲಾಗಿದೆ.
ಮೃತ ಉಗ್ರರ ಬಳಿಯಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಕ್ಷಣಾ ಇಲಾಖೆ ವಕ್ತಾರ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.
SCROLL FOR NEXT