ನವೀನ್ ಪಟ್ನಾಯಕ್ ಸಹಕಾರ ನೀಡಲಿಲ್ಲ, ಕೇಂದ್ರ ಸರ್ಕಾರದ ಯೋಜನೆಗಳಿಂದ ಒಡಿಶಾ ಬದಲಾವಣೆ: ಮೋದಿ
ಒಡಿಶಾ: ನವೀನ್ ಕುಮಾರ್ ನೇತೃತ್ವದ ಸರ್ಕಾರ ಒಡಿಶಾದಲ್ಲಿ ವೇಗಗತಿಯ ಅಭಿವೃದ್ಧಿ ತರಲು ಕೇಂದ್ರಕ್ಕೆ ಸಹಕಾರ ನೀಡಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕೇಂದ್ರ ಸರ್ಕಾರದೊಂದಿಗೆ ಒಡಿಶಾ ರಾಜ್ಯ ಸರ್ಕಾರ ಸ್ಪಂದಿಸಲಿಲ್ಲ, ನಮ್ಮ ಭಿನ್ನಾಭಿಪ್ರಾಯದ ಹೊರತಾಗಿಯೂ ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಯೋಜನೆಗಳು ನೆರವಾಗಿವೆ ಎಂದು ಮೋದಿ ಹೇಳಿದ್ದಾರೆ.
ಒಡಿಶಾ ರಾಜ್ಯದ ಜನತೆಯ ಅಭಿವೃದ್ಧಿಗಾಗಿ ಈ ಚೌಕೀದಾರ ಕೇಂದ್ರ ಸರ್ಕಾರದ ಯೋಜನೆಗಳ ಪ್ರಯೋಜನ ಸಿಗುವಂತೆ ಮಾಡಿದ್ದಾನೆ ಎಂದು ಮೋದಿ ಜನತೆಗೆ ತಿಳಿಸಿದ್ದಾರೆ.
2014 ರ ಚುನಾವಣೆ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದಿದ್ದರೆ ರಾಜ್ಯ ಎಲ್ಲಾ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿಯಾಗುತ್ತಿತ್ತು ಎಂದು ಮೋದಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics