ಕದನ ವಿರಾಮ ಉಲ್ಲಂಘನೆಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ: ಪಾಕ್ ನ 7 ಪೋಸ್ಟ್ ಗಳು ಧ್ವಂಸ! 
ದೇಶ

ಕದನ ವಿರಾಮ ಉಲ್ಲಂಘನೆಗೆ ಭಾರತದ ತೀಕ್ಷ್ಣ ಪ್ರತಿಕ್ರಿಯೆ: ಪಾಕ್ ನ 7 ಪೋಸ್ಟ್ ಗಳು ಧ್ವಂಸ!

ರಜೌರಿ ಹಾಗೂ ಪೂಂಚ್ ಜಿಲ್ಲೆಗಳಲ್ಲಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಯೋಧರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ.

ಜಮ್ಮು: ರಜೌರಿ ಹಾಗೂ ಪೂಂಚ್ ಜಿಲ್ಲೆಗಳಲ್ಲಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಯೋಧರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. 
ಎಲ್ ಒಸಿಯಲ್ಲಿ ಪಾಕಿಸ್ತಾನ ನಡೆಸುತ್ತಿದ್ದ ಶೆಲ್ ದಾಳಿಗೆ ಪ್ರತಿಯಾಗಿ ಭಾರತೀಯ ಯೋಧರೂ ದಾಳಿ ನಡೆಸಿದ್ದಾರೆ. ಪರಿಣಾಮ ಪಾಕಿಸ್ತಾನದ 7 ಪೋಸ್ಟ್ ಗಳು ಧ್ವಂಸಗೊಂಡಿದ್ದು, ಪಾಕಿಸ್ತಾನದ ಸೈನ್ಯಕ್ಕೆ ತೀವ್ರ ಹಾನಿಯುಂಟಾಗಿದೆ. 
ಮುನ್ನೆಚ್ಚರಿಕಾ ಕ್ರಮವಾಗಿ ಗಡಿ ಭಾಗದಲ್ಲಿರುವ ಎಲ್ಲಾ ಶಾಲೆಗಳಿಗೂ ರಜೆ ನೀಡಲಾಗಿದೆ. ಪಾಕಿಸ್ತಾನದ ಶೆಲ್ ದಾಳಿಗೆ ಏ.1 ರಂದು ಬಿಎಸ್ ಎಫ್ ಇನ್ಸ್ ಪೆಕ್ಟರ್ ಹಾಗೂ 5 ವರ್ಶದ ಬಾಲಕಿ ಮೃತಪಟ್ಟಿದ್ದರೆ 24 ಜನರು ಗಾಯಗೊಂಡಿದ್ದರು.
ಏ.2 ರಂದೂ ಸಹ ಶೆಲ್ಲಿಂಗ್ ಮುಂದುವರೆದಿದ್ದು, ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತದ ಪ್ರತಿ ದಾಳಿಗೆ ಪಾಕ್ ಆಕ್ರಮಿತ ಕಾಶ್ಮೀರದ ರಾಖಿಕ್ರಿ ಮತ್ತು ರಾವಲಕೋಟೆ ಫಾರ್ವರ್ಡ್ ಏರಿಯಾಗಳಲ್ಲಿ ಪಾಕ್ ಪೋಸ್ಟ್ ಗಳು ಧ್ವಂಸಗೊಂಡಿದ್ದು, ಸಾವುನೋವುಗಳು ಸಂಭವಿಸಿದೆ ಎಂದು ಪಾಕ್ ನ ಸೇನೆ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video