ದೇಶ

ಪ್ರಧಾನಿ ನರೇಂದ್ರ ಮೋದಿಗೆ ಯುಎಇ ಅತ್ಯುನ್ನತ ನಾಗರಿಕ ಪ್ರಶಸ್ತಿ

Shilpa D
ಅಬುಧಾಬಿ: ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ) ಭಾರತದ ಪ್ರಧಾನಿ ನರೇಂದ್ರ ಮೋದಿಗೆ ದೇಶದ ಅತ್ಯುನ್ನತ ಪ್ರಶಸ್ತಿ ನೀಡಿದೆ.
ಯುಎಇ ರಾಷ್ಟ್ರಪತಿ ಖಲೀಫಾ ಝಾಯಿದ್ ಬಿನ್ ಸುಲ್ತಾನ್ ಅಲ್ ನಹ್ಯಾನ್‍ ಅವರು ಪ್ರಧಾನಿ ಮೋದಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಘೋಷಿಸಿದ್ದಾರೆ. ಎರಡು ದೇಶಗಳ ನಡುವಿನ ಸಂಬಂಧಗಳ ಸುಧಾರಣೆಗೆ ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪ್ರಶಸ್ತಿ  ಎಂದು ಟ್ವೀಟ್ ಮಾಡಿದ್ದಾರೆ.
ಎರಡು ದೇಶಗಳ ಮಧ್ಯೆ ಐತಿಹಾಸಿಕ ಹಾಗೂ ವಿಸ್ತಾರವಾದ ರಣನೀತಿಗೆ ಸಂಬಂಧಿಸಿದ ಒಪ್ಪಂದಗಳ ಮೂಲಕ ಮತ್ತೊಮ್ಮೆ ಸಂಬಂಧಗಳ ವೃದ್ಧಿಸುವಲ್ಲಿ ಪ್ರಧಾನಿ ಮೋದಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಯುಎಇ ಹೇಳಿದೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (2007), ಚೀನಾದ ಪ್ರಧಾನಿ ಕ್ಸಿ ಜಿನ್‍ಪಿಂಗ್ (2018), ರಾಣಿ ಎಲಿಜಬೆತ್ (2010) ಹಾಗೂ ಸೌದಿ ಅರೆಬಿಯಾದ ರಾಜ ಸಲ್ಮಾನ್ ಬಿನ್ ಅಬ್ದುಲ್ ‍ಅಜೀಜ್‍ ಅಲ್ ಸೌದ್ (2016) ಅವರಿಗೆ  ಈ ಹಿಂದೆ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ.
SCROLL FOR NEXT