ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಟ್ಟಡ ತೆರವಿಗೆ ಆದೇಶಿಸಿದ್ದ ದೆಹಲಿ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ

Raghavendra Adiga
ನವದೆಹಲಿ: ನ್ಯಾಷನಲ್ ಹೆರಾಲ್ಡ್ ವಿರುದ್ಧ ನೀಡಲಾಗಿದ್ದತೆರವು ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ  ನಿಡಿದೆ.ಪತ್ರಿಕೆ ಕಛೇರಿಯನ್ನು ತೆರವು ಗೊಳಿಸುವ ಸಬಂಧ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್ ಅವರನ್ನೊಳಗೊಂಡ ನ್ಯಾಯಾಪೀಠ ಎಜಿಎಲ್ ಅರ್ಜಿ ವಿಚಾರಣೆ ನಡೆಸಿ ಕೇಂದ್ರ ಸರ್ಕಾರದ ಲ್ಯಾಂಡ್ ಆಂಡ್ ಡೆವಲಪ್ಮೆಂಟ್ ಆಫೀಸರ್ ಗೆ ನೋಟೀಸ್ ಜಾರಿಗೊಳಿಸಿದೆ.
ಯಂಗ್ ಇಂಡಿಯಾ ,ಮಾಲಿಕತ್ವದ ನ್ಯಾಷನಲ್ ಹೆರಾಲ್ಡ್ ಬಹುಪಾಲು ಷೇರುಗಳು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹು ಗಾಂಧಿ ಹಾಗೂ ಆಸ್ಕರ್ ಫರ್ನಾಂಡಿಸ್ ಹೆಸರಲ್ಲಿದೆ.
ಪತ್ರಿಕೆ ಕಛೇರಿ ಕಟ್ಟಡದ ಲೀಸ್ ಷರತ್ತುಗಳಲ್ಲಿ ಬದಲಾವಣೆಯಾದ ಹಿನ್ನೆಲೆ ಕಟ್ಟಡ ತೆರವುಉ ಆದೇಶವನ್ನು ಫೆಬ್ರವರಿಯಲ್ಲಿಲ್ ದೆಹಲಿ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿತ್ತು.
SCROLL FOR NEXT