ಅಮರಾವತಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಾಗ್ದಾಳಿ ಮುಂದುವರಿಸಿದ್ದಾರೆ, ಮೋದಿ ಒಬ್ಬ ಭಯಾನಕ ಉಗ್ರ ಎಂದು ವ್ಯಾಖ್ಯಾನಿಸಿದ್ದಾರೆ.
ಪ್ರಕಾಶಂ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ನಾಯ್ಡು, ಮೋದಿ ಸರ್ವಾಧಿಕಾರಿಯಾಗುತ್ತಿದ್ದಾರೆ, ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ಸಂಸ್ಥೆಗಳನ್ನು ಕೊಲೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಟಿಡಿಪಿ ನಾಯಕರುಗಳನ್ನು ಟಾರ್ಗೆಟ್ ಮಾಡಿರುವ ಮೋದಿ, ಕೇಂದ್ರದ ಎಜೆನ್ಸಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ, ಆ ಮೂಲಕ ಟಿಡಿಪಿ ನಾಯಕರ ಮನೆಗಳ ಮೇಲೆ ಐಟಿ ದಾಳಿ ಮಾಡಿಸುತ್ತಿದ್ದಾರೆ, ಜೊತೆಗೆ ಸಿಬಿಐ , ಜಾರಿ ನಿರ್ದೇಶನಾಲಯ ಮತ್ತು ಆರ್ ಬಿ ಐ ಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.
ನಮ್ಮು ಮುಖ್ಯ ಕಾರ್ಯದರ್ಶಿ ಎ.ಸಿ ಪುನೀತಾ ಅವರನ್ನು ಚುನಾವಣಾ ಆಯೋಗ ವರ್ಗಾವಣೆ ಮಾಡಿದೆ, ಅವರು ಯಾವ ತಪ್ಪು ಮಾಡಿದ್ದಾರೆ ಎಂದು ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಪ್ರಶ್ನಿಸಿದ್ದಾರೆ.