ಕಾಂಗ್ರೆಸ್ ನೀಡಿದ್ದ ಅಧಿಕಾರ ನಿರ್ವಹಿಸುವಲ್ಲಿ ಅಲ್ಪೇಶ್ ವಿಫಲ: ಹಾರ್ದಿಕ್ ಪಟೇಲ್
ಕಾಂಗ್ರೆಸ್ ತೊರೆದಿದ್ದ ಅಲ್ಪೇಶ್ ಠಾಕೂರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಹಾರ್ದಿಕ್ ಪಟೇಲ್, ಕಾಂಗ್ರೆಸ್ ನೀಡಿದ್ದ ಅಧಿಕಾರ ಹಾಗೂ ಗೌರವವನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.
ಅಹ್ಮದಾಬಾದ್: ಕಾಂಗ್ರೆಸ್ ತೊರೆದಿದ್ದ ಅಲ್ಪೇಶ್ ಠಾಕೂರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಹಾರ್ದಿಕ್ ಪಟೇಲ್, ಕಾಂಗ್ರೆಸ್ ನೀಡಿದ್ದ ಅಧಿಕಾರ ಹಾಗೂ ಗೌರವವನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ನೀಡಿದ್ದ ಅಧಿಕಾರ ಹಾಗೂ ಗೌರವವನ್ನು ನಿರ್ವಹಿಸುವುದಕ್ಕೆ ಸಾಧ್ಯವಾಗದ ಅಲ್ಪೇಶ್ ಠಾಕೂರ್, ಆಟ ಆಡಲು ಪ್ರಾರಂಭಿಸಿದರು ಎಂದು ಹಾರ್ದಿಕ್ ಆರೋಪಿಸಿದ್ದಾರೆ. 2017 ರ ಗುಜರಾತ್ ವಿಧಾನಸಭಾ ಚುನಾವಣೆ ವೇಳೆ ಅಲ್ಪೇಶ್ ಠಾಕೂರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಇದೇ ವೇಳೆ ಬಿಜೆಪಿ ವಿರುದ್ಧವೂ ಹರಿಹಾಯ್ದಿರುವ ಹಾರ್ದಿಕ್ ಪಟೇಲ್, ತಮ್ಮನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವುದಕ್ಕೆ ಬಿಜೆಪಿ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದೆ ಎಂದು ಆರೋಪ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.