ಸಂಗ್ರಹ ಚಿತ್ರ 
ದೇಶ

ಒಡಿಶಾ: ಅಪರಿಚಿತ ದುಷ್ಕರ್ಮಿಗಳಿಂದ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

ಅಪರಿಚಿತ ದುಷ್ಕರ್ಮಿಗಳು ಸ್ಥಳೀಯ ಬಿಜೆಪಿ ಮುಖಂಡನ ಮೇಲೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಒಡಿಶಾದ ಖುರ್ದಾ ಪಟ್ಟಣದಲ್ಲಿ ನಡೆದಿದೆ.

ಭುವನೇಶ್ವರ: ಅಪರಿಚಿತ ದುಷ್ಕರ್ಮಿಗಳು ಸ್ಥಳೀಯ ಬಿಜೆಪಿ ಮುಖಂಡನ ಮೇಲೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಒಡಿಶಾದ ಖುರ್ದಾ ಪಟ್ಟಣದಲ್ಲಿ ನಡೆದಿದೆ. ಪಕ್ಷದ ಮುಖಂಡನ ಕೊಲೆ ಬಳಿಕ ಕೇಸರಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ಹಿರಿಯ ನಾಯಕ ಮುಂಗಲಿ ಜೆನ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. 
ಈ ಘಟನೆಯನ್ನೂ ಖಂಡಿಸಿ  ಬಿಜೆಪಿ 14 ಗಂಟೆಗಳ ಖುರ್ದಾ ಬಂದ್‌ಗೆ ಕರೆ ನೀಡಿದ್ದು, ಕೂಡಲೇ ಕೊಲೆಪಾತಕರನ್ನು ಬಂಧಿಸಬೇಕು ಮತ್ತು ಅವರ ವಿರುದ್ಧ ಸೂಕ್ರ ಕ್ರಮ ಜರುಗಿಸಬೇಕು  ಎಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೂಲಗಳ ಪ್ರಕಾರ, ಸ್ಕೂಟರ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಹಳ  ಹತ್ತಿರದಿಂದ ಗುಂಡು ಹಾರಿಸಿದರು. ಇದರ ಪರಿಣಾಮ, ಮುಂಗಲಿ ಜೆನ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಿಜೆಪಿ ಕಚೇರಿ ಹಾಗೂ ಎಸ್‌ಪಿ ಕಚೇರಿ ಬಳಿಯೇ ಈ ಘಟನೆ ಜರುಗಿದೆ. ಈ  ಸಮಯದಲ್ಲಿ ಕುದ್ರಾ ಬಿಜೆಪಿ ಅಭ್ಯರ್ಥಿ ಕಲು ಚರಣ್ ಮಾತ್ರ ಹಾಜರಿದ್ದರು
ಅಪರಿಚಿತ ದುಷ್ಕರ್ಮಿಗಳು ಬಹಳ ಹತ್ತಿರದಿಂದ ಜೆನ ಅವರ ಮೇಲೆ ಗುಂಡಿನ ಮಳೆಗರೆದು ನಂತರ ಮಿಂಚಿನ ವೇಗದಲ್ಲಿ  ಪರಾರಿಯಾದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಆದರೆ ಈ ಘಟನೆಯಲ್ಲಿ ಬಿಜೆಪಿ ಅಭ್ಯರ್ಥಿ ಆಶ್ಚರ್ಯಕರ ರೀತಿಯಲ್ಲಿ  ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಕೂಡಲೇ ಪೊಲೀಸರು ಧಾವಿಸಿ  ಮೃತ ಜೆನ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ, ಹಂತಕರ ಪತ್ತೆಗೆ ವ್ಯಾಪಕ ಬಲೆ ಬೀಸಿದ್ದಾರೆ.
ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಈ ದಾಳಿಯನ್ನು ತೀವ್ರವಾಗಿ ಖಂಡಿಸಿ, ಅಪರಾಧಿಗಳ ವಿರುದ್ಧ ಸೂಕ್ರ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್