ತುಲಾಭಾರ ಸೇವೆ ವೇಳೆ ಅವಘಡ: ಕೇರಳ ಕಾಂಗ್ರೆಸ್ ನಾಯಕ ಶಶಿ ತರೂರ್ ತಲೆಗೆ ಏಟು 
ದೇಶ

ತುಲಾಭಾರ ಸೇವೆ ವೇಳೆ ಅವಘಡ: ಕೇರಳ ಕಾಂಗ್ರೆಸ್ ನಾಯಕ ಶಶಿ ತರೂರ್ ತಲೆಗೆ ಏಟು

ರುವನಂತಪುರಂ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶಶಿ ತರೂರ್ ತಾವು ಸ್ಥಳೀಯ ದೇವಾಲಯದಲ್ಲಿ ಧಾರ್ಮಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಗಾಯಗೊಂಡಿದ್ದಾರೆ. ಅವರ ತೆಲೆಗೆ ಎಂಟು ಕಡೆ ಹೊಲಿಗೆ ಹಾಕಲಾಗಿದೆ.

ತಿರುವನಂತಪುರಂ: ತಿರುವನಂತಪುರಂ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶಶಿ ತರೂರ್ ತಾವು ಸ್ಥಳೀಯ ದೇವಾಲಯದಲ್ಲಿ ಧಾರ್ಮಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಗಾಯಗೊಂಡಿದ್ದಾರೆ. ಅವರ ತೆಲೆಗೆ ಎಂಟು ಕಡೆ ಹೊಲಿಗೆ ಹಾಕಲಾಗಿದೆ.
ಸಾಂಪ್ರದಾಯಿಕ ಹೊಸ ವರ್ಷಾಚರಣೆ ಹಬ್ಬವಾಗಿರುವ ವಿಷು ಸಂಭ್ರಮದ ಕಾರಣ ಶಶಿ ತರೂರ್ ಪ್ರಸಿದ್ದ ಗಾಂಧಾರಿ ಅಮ್ಮ ನ್ ದೇವಸ್ಥಾನಕ್ಕೆ ತೆರಳಿದ್ದಾರೆ. ಅಲ್ಲಿ ಅವರು ತುಲಾಭಾರ ಸೇವೆ ನೆರವೇರಿಸಲು ಮುಂದಾದಾಗ ತುಲಾಭಾರಕ್ಕಾಗಿ ಹಾಕಲಾಗಿದ್ದ ತಕ್ಕಡಿಯ ಕಬ್ಬಿಣದ ಸರಪಣಿಗಳು ತುಂಡಾಗಿ ಅವರ ತಲೆ ಮೇಲೆ ಬಿದ್ದಿದೆ. ತಕ್ಷಣ ಅವರನ್ನು ರಾಜ್ಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ..
ಸಧ್ಯ ತರೂರ್ ಅವರ ತಲೆಗೆ ಎಂಟು ಹೊಲಿಗೆಗಳನ್ನು ಹಾಕಲಾಗಿದ್ದು ಕಾಂಗ್ರೆಸ್ ಮುಖಂಡರ ಆರೋಗ್ಯ ಸ್ಥಿತಿ ಕುರಿತಂತೆ ವೈದ್ಯರು ಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಾಲಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ತರೂರ್ ಬಿಜೆಪಿಯಿಂದ ಮಿಜೋರಾಂ ಮಾಜಿ ರಾಜ್ಯಪಾಲ ಕೆ. ರಾಜಶೇಕರನ್ ಹಾಗೂ ಸಿಪಿಐ ನಿಂದ  ಸಿ.ವಿ. ದಿವಾಕರನ್ ಅವರನ್ನು ಎದುರಿಸಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!