ಸಂಗ್ರಹ ಚಿತ್ರ 
ದೇಶ

ಸುಶೀಲ್ ಮೋದಿ ಆಯ್ತು ಈಗ ಲಲಿತ್ ಮೋದಿಯಿಂದಲೂ ರಾಹುಲ್ ವಿರುದ್ಧ ದೂರು

ಕಳ್ಳರ ಹೆಸರಿನ ಮುಂದೆ ಮೋದಿ ಹೆಸರಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ಸಹ ತಿರುಗಿ ಬಿದ್ದಿದ್ದು, ರಾಹುಲ್ ಗಾಂಧಿ ವಿರುದ್ಧ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.

ನವದೆಹಲಿ: ಕಳ್ಳರ ಹೆಸರಿನ ಮುಂದೆ ಮೋದಿ ಹೆಸರಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ಸಹ ತಿರುಗಿ ಬಿದ್ದಿದ್ದು, ರಾಹುಲ್ ಗಾಂಧಿ ವಿರುದ್ಧ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಬರೆದುಕೊಂಡಿರುವ ಅವರು, ರಾಹುಲ್ ಗಾಂಧಿ ಎಲ್ಲ ಕಳ್ಳರ ಹೆಸರಿನ ಮುಂದೆ ಮೋದಿ ಎಂದು ಇರುತ್ತದೆ ಎಂದು ಟೀಕಿಸುವ ಮೂಲಕ ನಮ್ಮ ಸರ್ ನೇಮ್ ಗೆ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ನಾನು ಖಂಡಿತಾ ಬ್ರಿಟನ್ ಕೋರ್ಟ್ ನಲ್ಲಿ ದಾವೆ ಹೂಡುತ್ತೇನೆ ಎಂದು ಹೇಳಿದ್ದಾರೆ.
ಅಂತೆಯೇ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಲಲಿತ್, ಐದು ದಶಕಗಳಲ್ಲಿ ದೇಶದ ಸಂಪತನ್ನು ಲೂಟಿ ಮಾಡಿದ ಕಳ್ಳರು ಯಾರು ಎಂದು ದೇಶದ ಜನತೆಗೆ ತಿಳಿದಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮೊದಲು ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಕೂಡ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಪಾಟ್ನಾ ಹೈಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಇದೀಗ ಬಿಹಾರ ಉಪಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ. 'ರಾಹುಲ್ ಗಾಂಧಿ ಏಪ್ರಿಲ್ 13ರಂದು ಕರ್ನಾಟಕದ ಕೋಲಾರದಲ್ಲಿ ನೀಡಿರುವ ಹೇಳಿಕೆಯಲ್ಲಿ, ಹಣಕಾಸು ಅವ್ಯವಹಾರದಲ್ಲಿ ಭಾಗಿಯಾಗಿ ವಿದೇಶಕ್ಕೆ ಹಾರಿರುವ ನೀರವ್ ಮೋದಿ, ಐಪಿಲ್ ಕ್ರಿಕೆಟ್ ನ ಆಡಳಿತಾಧಿಕಾರಿಯಾಗಿದ್ದ ಲಲಿತ್ ಮೋದಿ, ರಫೇಲ್ ಯುದ್ಧವಿಮಾನ ಹಗರಣದ ನರೇಂದ್ರ ಮೋದಿ ಸೇರಿದಂತೆ ಎಲ್ಲರೂ ಒಂದಿಲ್ಲೊಂದು ಹಗರಣದಲ್ಲಿ ಭಾಗಿಯಾಗಿದ್ದಾರೆ. ಈ ಎಲ್ಲಾ ಕಳ್ಳರ ಹೆಸರಿನ ಮುಂದೆ ಮೋದಿ ಎಂಬ ಸರ್ ನೇಮ್ ಇದೆ ಎಂದಿರುವುದು ಐಪಿಸಿ ಸೆಕ್ಷನ್ 500ರ ಅಡಿಯಲ್ಲಿ ಅಪರಾಧವಾಗುತ್ತದೆ. ರಾಹುಲ್ ಗಾಂಧಿ ನೀಡಿರುವ ಈ ಹೇಳಿಕೆ ಮಾನಹಾನಿಕರವಾಗಿದೆ. ಈ ಅಪರಾಧಕ್ಕೆ ಎರಡು ವರ್ಷ ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸಬಹುದು ಎಂದು ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರ ಈ ಹೇಳಿಕೆ ಮೋದಿ ಎಂಬ ಹೆಸರಿನವರ ಘನತೆಗೆ ಸಾರ್ವಜನಿಕರ ಹಿತದೃಷ್ಟಿಯಲ್ಲಿ ಕುಂದುಂಟು ಮಾಡುತ್ತದೆ. ಆದ್ದರಿಂದ ಅವರನ್ನು ಕರೆಸಿ ವಿಚಾರಣೆ ನಡೆಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಇದಲ್ಲದೆ, ರಾಹುಲ್ ಗಾಂಧಿ ಅವರು ಎಲ್ಲಾ ಸಮಾರಂಭಗಳಲ್ಲೂ ನೀಡುತ್ತಿರುವ 'ಚೌಕಿದಾರ್ ಚೋರ್ ಹೈ' ಹೇಳಿಕೆಯೂ ಕೂಡ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅವಹೇಳನ ಮಾಡುವಂತಹ ಹೇಳಿಕೆಯಾಗಿದೆ. ರಾಹುಲ್ ಗಾಂಧಿಯವರ ಈ ನಡೆಯ ಕುರಿತು ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ಕಾದು ನೋಡುತ್ತಿದ್ದೇನೆ ಎಂದು ಸುಶೀಲ್ ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!