ರೋಹಿತ್ ಶೇಖರ್ ತಿವಾರಿ 
ದೇಶ

ರೋಹಿತ್ ತಿವಾರಿ ಕೊಲೆ ಪ್ರಕರಣ: ಪೊಲೀಸರಿಂದ ಪತ್ನಿ ಅಪೂರ್ವ ವಿಚಾರಣೆ

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ದಿ. ಎನ್‌.ಡಿ.ತಿವಾರಿ ಅವರ ಪುತ್ರ ರೋಹಿತ್ ಶೇಖರ್ ತಿವಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ರೈಂ ಬ್ರ್ಯಾಂಚ್‌....

ನವದೆಹಲಿ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ದಿ. ಎನ್‌.ಡಿ.ತಿವಾರಿ ಅವರ ಪುತ್ರ ರೋಹಿತ್ ಶೇಖರ್ ತಿವಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕ್ರೈಂ ಬ್ರ್ಯಾಂಚ್‌ ಪೊಲೀಸರು ಅವರ ಪತ್ನಿ ಅಪೂರ್ವ ಅವರನ್ನು ಶನಿವಾರ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ದೆಹಲಿಯ ಡಿಫೆನ್ಸ್ ಕಾಲೋನಿಯಲ್ಲಿರುವ ತಿವಾರಿ ನಿವಾಸದಲ್ಲಿಯೇ ಪೊಲೀಸರು ಅಪೂರ್ವ ಅವರನ್ನು ವಿಚಾರಣೆಗೆ ಒಳಪಡಿಸಿದ್ದು, ಮಹಿಳಾ ಪೊಲೀಸರನ್ನು ನಿಯೋಜಿಸಲಾಗಿದೆ.
ರೋಹಿತ್ ಅವರು ಅಪೂರ್ವ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಮದುವೆಯಾದ ದಿನದಿಂದಲೂ ಅವರಿಬ್ಬರ ಸಂಬಂಧ ಅಷ್ಟು ಚೆನ್ನಾಗಿ ಇರಲಿಲ್ಲ. ಪೊಲೀಸರು ಈಗ ರೋಹಿತ್ ಪತ್ನಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ರೋಹಿತ್ ಅವರ ತಾಯಿ ಉಜ್ವಲಾ ತಿವಾರಿ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ನಿನ್ನೆ ರೋಹಿತ್ ಸಾವು ಅಸ್ವಾಭಾವಿಕ ಎಂದು ಮರಣೋತ್ತರ ಪರೀಕ್ಷಾ ವರದಿ ತಿಳಿಸಿದ್ದು, ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್‌ 302 ಅಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೋಹಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಅವರ ಮೂಗಿನಲ್ಲಿ ರಕ್ತ ಸೋರುತ್ತಿತ್ತು. ಹೀಗಾಗಿ ಪಿಲ್ಲೋದಿಂದ ಅವರನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಮಂಗಳವಾರ ರೋಹಿತ್ ತಿವಾರಿ ಅವರು ಡಿಫೆನ್ಸ್ ಕಾಲೋನಿಯ ನಿವಾಸದಲ್ಲಿ ಮಲಗಿದ್ದಲ್ಲೇ ಮೃತಪಟ್ಟಿದ್ದರು. ಅವರು ಪ್ರತಿಕ್ರಿಯೆ ನೀಡದ್ದನ್ನು ನೋಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT