ದೇಶ

ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಪಿತೂರಿ ಎಂದು ಹೇಳಿದ್ದ ವಕೀಲರಿಗೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ

Sumana Upadhyaya
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಲುಕಿ ಹಾಕಿಸಲು ಪಿತೂರಿ ನಡೆಸಲಾಗಿತ್ತು ಎಂದು ಆರೋಪಿಸಿರುವ ಅಡ್ವೊಕೇಟ್ ಉತ್ಸವ್ ಬೈನ್ಸ್ ಅವರಿಂದ ಸುಪ್ರೀಂ ಕೋರ್ಟ್ ಮಂಗಳವಾರ ಪ್ರತಿಕ್ರಿಯೆ ಕೇಳಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ವಕೀಲ ಉತ್ಸವ್ ಸಿಂಗ್ ಬೈನ್ಸ್ ಅವರಿಗೆ ನೊಟೀಸ್ ಜಾರಿ ಮಾಡಿದೆ.  ಸುಪ್ರೀಂ ಕೋರ್ಟ್ ಮಾಜಿ ಮಹಿಳಾ ಉದ್ಯೋಗಿ ಪರವಾಗಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಆರೋಪ ಹೊರಿಸಲು ತಮಗೆ ಒಂದೂವರೆ ಕೋಟಿ ರೂಪಾಯಿ ಹಣದ ಆಮಿಷವೊಡ್ಡಲಾಗಿತ್ತು ಎಂದು ವಕೀಲ ಉತ್ಸವ್ ಸಿಂಗ್ ಬೈನ್ಸ್ ಆರೋಪ ಮಾಡಿದ್ದರು.
SCROLL FOR NEXT