ತಮಿಳುನಾಡಿಗೆ ಅಪ್ಪಳಿಸಲಿದೆ ಫನಿ ಚಂಡಮಾರುತ, ಚೆನ್ನೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
ಏಪ್ರಿಲ್ 29ರ ವೇಳೆಗೆ ತಮಿಳುನಾಡಿಗೆ ಫನಿ ಚಂಡಮಾರುತ ಅಪ್ಪಳಿಸಲಿದ್ದು, ರಾಜಧಾನಿ ಚೆನ್ನೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ...
ಚೆನ್ನೈ: ಏಪ್ರಿಲ್ 29ರ ವೇಳೆಗೆ ತಮಿಳುನಾಡಿಗೆ ಫನಿ ಚಂಡಮಾರುತ ಅಪ್ಪಳಿಸಲಿದ್ದು, ರಾಜಧಾನಿ ಚೆನ್ನೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕಡಿಮೆ ಒತ್ತಡದ ಪರಿಣಾಮ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಬೀಸುತ್ತಿರುವ ಭಾರೀ ಗಾಳಿ ವಾಯುವ್ಯ ಭಾಗದ ಮೂಲಕ ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದೆ.
ತಮಿಳುನಾಡಿನ ದಕ್ಷಿಣ ಮತ್ತು ಒಳನಾಡಿನ ಜಿಲ್ಲೆಗಳು ಹಾಗೂ ವಿಶೇಷವಾಗಿ ಚೆನ್ನೈ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಈ ಚಂಡಮಾರುತ ತಮಿಳುನಾಡು ಹಾಗೂ ಶ್ರೀಲಂಕಾ ಮೂಲಕ ಚಲಿಸಲಿದೆ. ಪುದುಚೇರಿಯಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದ್ದು, ತಮಿಳುನಾಡಿನಲ್ಲಿ ಅಧಿಕ ಮಳೆಯಾಗಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.