ಪ್ರಿಯಾಂಕಾ ಗಾಂಧಿ 
ದೇಶ

ಮೋದಿ 'ಪ್ರಧಾನ ಪ್ರಚಾರ ಮಂತ್ರಿ': ಪ್ರಿಯಾಂಕಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಧಾನ ಪ್ರಚಾರ ಮಂತ್ರಿ ಎಂದು ಕರೆದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು...

ಬಂಡಾ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಧಾನ ಪ್ರಚಾರ ಮಂತ್ರಿ ಎಂದು ಕರೆದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಬಿಜೆಪಿ ಉತ್ತರ ಪ್ರದೇಶದ ಬುಂದೇಲ್ ಖಂಡದ ಬಂಡಾ ಮತ್ತು ಅರಿಡ್ ನಲ್ಲಿ ಕುಡಿಯುವ ನೀರಿನಿಂದ ರಸ್ತೆ ಸ್ಪಚ್ಛಗೊಳಿಸುವ ಮೂಲಕ ಕುಡಿಯುವ ನೀರನ್ನು ವ್ಯರ್ಥ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಒಂದು ಕಡೆ ಬುಂದೇಲ್ ಖಂಡದಲ್ಲಿ ಮನುಷ್ಯರು, ಪ್ರಾಣಿ, ಪಕ್ಷಿಗಳು ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಪ್ರಧಾನ ಪ್ರಚಾರ ಮಂತ್ರಿ(ಮೋದಿ)ಯ ಸ್ವಾಗತಕ್ಕಾಗಿ ಕುಡಿಯುವ ನೀರಿನಿಂದ ರಸ್ತೆಗಳನ್ನು ಸ್ವಚ್ಛಗೊಳಿಸುವ ಮೂಲಕ ವ್ಯರ್ಥ ಮಾಡಲಾಗುತ್ತಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.
ಅವರು(ಮೋದಿ) ಚೌಕಿದಾರ್(ಕಾವಲುಗಾರ) ಅಥವಾ ಚಕ್ರವರ್ತಿನಾ? ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಸ್ವಕ್ಷೇತ್ರ ವಾರಣಾಸಿ ಪ್ರವಾಸದಲ್ಲಿದ್ದು, ಸುಮಾರು 6 ಕಿ.ಮೀ.ವರೆಗೆ ಭರ್ಜರಿ ರೋಡ್ ಶೋ ನಡೆಸುತ್ತಿದ್ದಾರೆ. ಬಳಿಕ ಬುಂದೇಲ್ ಖಂಡ ಪ್ರದೇಶದಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!