ದೇಶ

ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ವಿಚಾರಣಾ ಸಮಿತಿಯಲ್ಲಿ ನ್ಯಾ. ರಮಣ ನೇಮಕಕ್ಕೆ ಮಹಿಳೆ ಆಕ್ಷೇಪ!

Srinivas Rao BV
ನವದೆಹಲಿ: ಸಿಜೆಐ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪವನ್ನು ವಿಚಾರಣೆ ನಡೆಸಲು ರಚಿಸಲಾಗಿರುವ ಆಂತರಿಕ ಸಮಿತಿಯಲ್ಲಿ ನ್ಯಾ. ರಮಣ ಅವರನ್ನು ನೇಮಕ ಮಾಡಿರುವುದನ್ನು ದೂರು ನೀಡಿರುವ ಮಹಿಳೆ ವಿರೋಧಿಸಿದ್ದಾರೆ. 
ಸಮಿತಿ ಸದಸ್ಯರಿಗೆ ಪತ್ರ ಬರೆದಿರುವ ಮಹಿಳೆ, ನ್ಯಾಯಸಮ್ಮತವಾದ ವಿಚಾರಣೆ ನಡೆಯಬೇಕಾದರೆ ನ್ಯಾ. ಎನ್ ವಿ ರಮಣ ಅವರನ್ನು ಸಮಿತಿಯಿಂದ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ. 
ಸಿಜೆಐ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಪ್ರಕರಣದ ವಿಚಾರಣೆ ನಡೆಸಲು ನ್ಯಾ. ಎಸ್ಎ ಬಾಬ್ಡೆ, ಎನ್ ವಿ ರಮಣ, ಇಂದಿರಾ ಬ್ಯಾನರ್ಜಿ ಅವರಿದ್ದ ಸಮಿತಿಯನ್ನು ರಚಿಸಲಾಗಿತ್ತು. "ನಾನು ಸಿಜೆಐ ಅವರ ಗೃಹ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೆ, ನ್ಯಾ. ರಮಣ ಸಿಜೆಐ ನ ಆಪ್ತ ಮಿತ್ರ, ಅಷ್ಟೇ ಅಲ್ಲದೇ ಕುಟುಂಬ ಸದಸ್ಯರಿದ್ದಂತೆ. ಸಿಜೆಐ ನಿವಾಸಕ್ಕೆ ಅವರು ಆಗಾಗ್ಗೆ ಹೋಗುತ್ತಿರುತ್ತಾರೆ. 
ಈ ಹಿನ್ನೆಲೆಯಲ್ಲಿ ನನ್ನ ಪ್ರಕರಣದ ವಿಚಾರಣೆ ನಡೆಸುವಾಗ ನ್ಯಾಯಸಮ್ಮತ ವಿಚಾರಣೆ ನಡೆಯುವುದಿಲ್ಲ ಎಂಬ ಆತಂಕ ನನ್ನನ್ನು ಕಾಡುತ್ತಿದೆ. ಅಷ್ಟೇ ಅಲ್ಲದೇ ಸುಪ್ರೀಂ ಕೋರ್ಟ್ ವಿಧಿಸಿರುವ ವಿಶಾಖಾ ಮಾರ್ಗಸೂಚಿಗಳ ಪ್ರಕಾರ ಇಂತಹ ಪ್ರಕರಣಗಳ ವಿಚಾರಣೆ ನಡೆಸುವಾಗ ಮಹಿಳಾ ನ್ಯಾಯಮೂರ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿರಬೇಕು, ಆದರೆ ಈ ಪ್ರಕರಣದಲ್ಲಿ ಇರುವ ಒಬ್ಬರೇ ಮಹಿಳಾ ನ್ಯಾಯಮೂರ್ತಿ ಇದ್ದಾರೆ ಎಂದು ಆರೋಪ ಮಾಡಿರುವ ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 
SCROLL FOR NEXT