ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾವಿರುದ್ಧ ಚಿನಾವಣಾ ಆಯೋಗ ಯಾವುದೇ ಕ್ರಮ ಜರುಗಿಸುವುದಿಲ್ಲ, ಮೋದಿ ಬಗ್ಗೆ ಆಯೋಗ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ನರೇಂದ್ರ ಮೋದಿ ಹಾಗೂ ಅಮಿತಾ ಶ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದ್ದರೂ ಚುನಾವಣಾ ಆಯೋಗ ಯಾವ ಕ್ರಮಕ್ಕೆ ಮುಂದಾಗಿಲ್ಲ ಎಂದು ಆಯೋಗದ ವಿರುದ್ಧ ಕಾಂಗ್ರೆಸ್ ಕೋರ್ಟ್ ಮೆಟ್ಟಿಲೇರಿದೆ.
ಚುನಾವಣಾ ಪ್ರಚಾರದ ಸಮಯದಲ್ಲಿ ಇಬ್ಬರೂ ನಾಯಕರು ಮಿಲಿಟರಿ ಕಾರ್ಯಾಚರಣೆಯನ್ನು ಪ್ರಚಾರಕ್ಕಾಗಿ ಬಳಸಿಕೊಂಡಿದ್ದಾರೆ ಎಂದಿರುವ ಕಾಂಗ್ರೆಸ್ ವಿವಿಧ ದೂರುಗಳ ಹೊರತಾಗಿಯೂ ಆಯೋಗವು ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಎಂದು ಹೇಳಿದೆ.