ನಾರಾಯಣ ಸಾಯಿ 
ದೇಶ

ಅತ್ಯಾಚಾರ ಪ್ರಕರಣ: ಅಸಾರಾಂ ಬಾಪು ಪುತ್ರ ನಾರಾಯಣ ಸಾಯಿಗೆ ಜೀವಾವಧಿ ಶಿಕ್ಷೆ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ವಿವಾದಿತ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರ ಪುತ್ರ ನಾರಾಯಣ ಸಾಯಿ...

ಸೂರತ್: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ವಿವಾದಿತ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರ ಪುತ್ರ ನಾರಾಯಣ ಸಾಯಿಗೆ ಸೂರತ್ ಸೆಷನ್ಸ್ ಕೋರ್ಟ್ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಕಳೆದ ಶುಕ್ರವಾರ ನಾರಾಯಣ ಸಾಯಿ ಅಪರಾಧಿ ಎಂದು ತೀರ್ಪು ನೀಡಿದ್ದ ಗುಜರಾತ್‌ನ ಸೂರತ್ ಕೋರ್ಟ್ ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು, ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರುಪಾಯಿ ದಂಡ ವಿಧಿಸಿದೆ.
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಆಶ್ರಮದಲ್ಲಿ ಮಹಿಳೆಯರು, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಸಿಕ್ಕಿಬಿದ್ದಿದ್ದ ವಿವಾದಿತ  ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು  ಮತ್ತು ಆತನ ಪುತ್ರನ ಒಂದೊಂದೇ ಆರೋಪಗಳು ಸಾಬೀತಾಗುತ್ತಿವೆ.
2013ರಲ್ಲಿ ಅಸರಾಂ ಬಾಪು ಅಶ್ರಮದಲ್ಲಿದ್ದ ಸೂರತ್ ಮೂಲದ ಇಬ್ಬರು ಸಹೋದರಿಯರು ತಮ್ಮ ಮೇಲೆ ಅಸಾರಾಂ ಬಾಪು ಮತ್ತು ಆತನ ಪುತ್ರ ನಾರಾಯಣ ಸಾಯಿ ನಿರಂತರ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರ ಬಳಿ ಅಳಲು ತೋಡಿಕೊಂಡಿದ್ದರು.
2002ರಿಂದ 2005ರವರೆಗೂ ತಾನು ಅಸಾರಾಂ ಬಾಪು ಆಶ್ರಮದಲ್ಲಿದ್ದ ಸಂದರ್ಭದಲ್ಲಿ ತಂದೆ ಹಾಗೂ ಮಗ ಇಬ್ಬರೂ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ನಾರಾಯಣ ಸಾಯಿ ತಮ್ಮ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದರು ಎಂದು ಸಹೋದರಿಯರು ಆರೋಪಿಸಿದ್ದರು. 
ಈ ಸಂಬಂಧ ಜೋಧ್ ಪುರ ಕೋರ್ಟ್ ನಲ್ಲಿ ಅಸರಾಂ ಬಾಪು ಮತ್ತು ನಾರಾಯಣ ಸಾಯಿ ವಿರುದ್ಧ ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು. ಈ ವಿಚಾರದ ಬೆನ್ನಲ್ಲೇ ನಾಪತ್ತೆಯಾಗಿದ್ದ ನಾರಾಯಣ ಸಾಯಿಯನ್ನು 2013ರಲ್ಲಿ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು.
ಇನ್ನು ಅಸಾರಾಂ ಬಾಪು ಸಹ ಜೀವಾವಧಿ ಶಿಕ್ಷೆಯನ್ನು ಎದುರಿಸುತ್ತಿದ್ದು, ಜೋಧಪುರದ ಅತ್ಯಾಚಾರ ಕೇಸ್‌ನಲ್ಲಿ ಅಪರಾಧಿಯಾಗಿರುವ ಅವರು ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT