ಮಾಯಾವತಿ 
ದೇಶ

ರಾಜಸ್ಥಾನ: ಹೆಚ್ಚು ಹಣ ನೀಡಿದವರಿಗೆ ಪಕ್ಷದಲ್ಲಿ ಟಿಕೆಟ್ - ಬಿಎಸ್ ಪಿ ಶಾಸಕ

ಹೆಚ್ಚು ಹಣ ಕೊಟ್ಟವರಿಗೆ ತಮ್ಮ ಪಕ್ಷದಲ್ಲಿ ಟಿಕೆಟ್ ನೀಡಲಾಗುತ್ತದೆ ಎಂಬ ಬಿಎಸ್ ಪಿ ಶಾಸಕನ ಹೇಳಿಕೆ ರಾಜಸ್ಥಾನದ ರಾಜಕೀಯದಲ್ಲಿ ಹೊಸ ವಿವಾದ ಹುಟ್ಟುಹಾಕಿದೆ.

ಜೈಪುರ: ಹೆಚ್ಚು ಹಣ ಕೊಟ್ಟವರಿಗೆ ತಮ್ಮ ಪಕ್ಷದಲ್ಲಿ  ಟಿಕೆಟ್ ನೀಡಲಾಗುತ್ತದೆ ಎಂಬ ಬಿಎಸ್ ಪಿ ಶಾಸಕನ ಹೇಳಿಕೆ ರಾಜಸ್ಥಾನದ ರಾಜಕೀಯದಲ್ಲಿ ಹೊಸ ವಿವಾದ ಹುಟ್ಟುಹಾಕಿದೆ.
ರಾಜಸ್ಥಾನದ ವಿಧಾನಸಭೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಯೂನಿಯನ್ ಅಧ್ಯಾಯ ಮತ್ತು ಸಾರ್ವಜನಿಕ ನೀತಿ ಕುರಿತು ವಿಚಾರಗೋಷ್ಠಿಯಲ್ಲಿ ಉದೈಪುರ್ವತಿ ಬಿಎಸ್ಪಿ ಶಾಸಕ ರಾಜೇಂದ್ರ ಸಿಂಗ್ ಗುಡಾ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಹರಾಜಿನಲ್ಲಿ ಹೆಚ್ಚು ಬಿಡ್ ಮಾಡುವವರಿಗೆ ಪಕ್ಷದ ಟಿಕೆಟ್ ದೊರೆಯುತ್ತದೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ರಾಜೇಂದ್ರ ರಾಥೋರ್, ಈ ಹೇಳಿಕೆಗೆ ಬಿಎಸ್ಪಿ ಪಕ್ಷದ ವರಿಷ್ಠೆ ಮಾಯಾವತಿ ಅವರೇ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 
ಆದರೆ, ತಮ್ಮ ಪಕ್ಷದ ಶಾಸಕನೇ ನೀಡಿರುವ ಹೇಳಿಕೆ ಬಗ್ಗೆ ಬಿಎಸ್ಪಿ ನಾಯಕರು ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಶಾಸಕರ ಸಂಸದೀಯ ವ್ಯವಹಾರಗಳಿಗೆ ಆಯೋಜಿಸಲಾಗಿದ್ದ ಈ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಚಾಲನೆ ನೀಡಿದ್ದರು. ರಾಜಸ್ತಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಆರು ಶಾಸಕರನ್ನು ಹೊಂದಿರುವ ಬಿಎಸ್ಪಿ ಬಾಹ್ಯ ಬೆಂಬಲ ನೀಡುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ