ದೇಶ

ಅಮರನಾಥ ಯಾತ್ರೆ ಮೊಟಕುಗೊಳಿಸಿ, ತಕ್ಷಣ ಕಾಶ್ಮೀರ ತೊರೆಯಿರಿ: ಯಾತ್ರಿಗಳಿಗೆ ಸರ್ಕಾರ ಸೂಚನೆ

Lingaraj Badiger
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದ್ದು, ಕೂಡಲೇ ಅಮರನಾಥ ಯಾತ್ರಿಗಳು ತಮ್ಮ ಯಾತ್ರೆಯನ್ನು ಮೊಟಕುಗೊಳಿಸಿ, ಕಣಿವೆ ರಾಜ್ಯವನ್ನು ತೊರೆಯುವಂತೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಆದೇಶಿಸಿದೆ.
ಉಗ್ರರು ಅಮರನಾಥ ಯಾತ್ರೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಕಾಶ್ಮೀರ ಕಣಿವೆಯಲ್ಲಿ ಸದ್ಯದ ಭದ್ರತಾ ಪರಿಸ್ಥಿತಿ ಮತ್ತು ಯಾತ್ರಿಗಳ ಸುರಕ್ಷತೆ, ಭದ್ರತಾ ದೃಷ್ಟಿಯಿಂದ ಆದಷ್ಟು ಬೇಗ ಕಣಿವೆ ರಾಜ್ಯ ತೊರೆಯಿರಿ ಎಂದು ಜಮ್ಮು ಮತ್ತು ಕಾಶ್ಮೀರ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಭದ್ರತಾ ಪ್ರಕಟಣೆ ನೀಡಿದ್ದಾರೆ.
ಕಾಶ್ಮೀರದಲ್ಲಿ ಉಗ್ರ ದಾಳಿಯ ಬೆದರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 25 ಸಾವಿರ ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿಯನ್ನು ರವಾನಿಸಲು ನಿರ್ಧರಿಸಿದೆ. ಕಳೆದ ವಾರವಷ್ಟೇ 10 ಸಾವಿರ ಪ್ಯಾರಾ ಮಿಲಿಟರಿ ಸಿಬ್ಬಂದಿಯನ್ನು ಕಣಿವೆ ರಾಜ್ಯಕ್ಕೆ ನಿಯೋಜಿಸಲಾಗಿತ್ತು.
SCROLL FOR NEXT