ಅಪಘಾತ ನಡೆದ ಸ್ಥಳ 
ದೇಶ

ಕೇರಳ: ಕುಡಿದು ಚಾಲನೆ ಮಾಡುತ್ತಿದ್ದ ಐಎಎಸ್ ಅಧಿಕಾರಿಯ ಕಾರು, ಬೈಕಿಗೆ ಡಿಕ್ಕಿ, ಪತ್ರಕರ್ತ ಸಾವು

ಕುಡಿದು ಚಾಲನೆ ಮಾಡುತ್ತಿದ್ದ ಕೇರಳದ ಐಎಎಸ್ ಅಧಿಕಾರಿ ಶ್ರೀರಾಮ್ ವೆಂಕಟರಾಮನ್ ಅವರ ಕಾರು ಶನಿವಾರ ಬೆಳಗಿನ ಜಾವ ಪತ್ರಕರ್ತರೊಬ್ಬರ ಬೈಕಿಗೆ...

ತಿರುವನಂತಪುರಂ: ಕುಡಿದು ಚಾಲನೆ ಮಾಡುತ್ತಿದ್ದ ಕೇರಳದ ಐಎಎಸ್ ಅಧಿಕಾರಿ ಶ್ರೀರಾಮ್ ವೆಂಕಟರಾಮನ್ ಅವರ ಕಾರು ಶನಿವಾರ ಬೆಳಗಿನ ಜಾವ ಪತ್ರಕರ್ತರೊಬ್ಬರ ಬೈಕಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ಬೆಳಗಿನ ಜಾವ ಮ್ಯೂಸಿಯಂ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಪತ್ರಕರ್ತ ಕೆಎಂ ಬಶೀರ್ ಅವರು ಮೃತಪಟ್ಟ ದುರ್ದೈವಿ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಶೀರ್ ಅವರನ್ನು ಕೂಡಲೇ ಸರ್ಕಾರಿ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಇನ್ನು ಕುಡಿದ ಮತ್ತಿನಲ್ಲಿ ಕಾರು ಚಾಲನೆ ಮಾಡಿದ ಐಎಎಸ್ ಅಧಿಕಾರಿ ಶ್ರೀರಾಮ್ ಸಹ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 
ಬಶೀರ್ ನಿಧನಕ್ಕೆ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ತೀವ್ರ ಸಂತಪಾ ಸೂಚಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ ಚೌಧರಿ