ದೇಶ

ಉನ್ನಾವ್ ಅತ್ಯಾಚಾರ ಪ್ರಕರಣದ ಆರೋಪಿ, ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಶಸ್ತ್ರಾಸ್ತ್ರ ಪರವಾನಗಿ ರದ್ದು

Lingaraj Badiger
ಉನ್ನಾವ್: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಹಾಗೂ ಸಂತ್ರಸ್ತೆಯ ಇಬ್ಬರು ಸಂಬಂಧಿಗಳನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಉತ್ತರ ಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರ ಶಸ್ತ್ರಾಸ್ತ್ರ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.
ಸೆಂಗರ್ ಅವರು ಒಂದು ಸಿಂಗಲ್ ಬ್ಯಾರಲ್ ಗನ್, ಒಂದು ರೈಫಲ್ ಹಾಗೂ ರಿವಾಲ್ವಾರ್ ಪರವಾನಗಿ ಹೊಂದಿದ್ದರು.
ಅತ್ಯಾಚಾರ ಆರೋಪದ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಏಪ್ರಿಲ್ 13, 2018ರಂದು ಬಂಧಿಸಲಾಗಿದ್ದು, ಸದ್ಯ ಸೀತಾಪುರ್ ಜಿಲ್ಲಾ ಕಾರಾಗೃಹದಲ್ಲಿದ್ದಾರೆ.
ಕುಲದೀಪ್ ಸಿಂಗ್ ಸೆಂಗರ್ ಗನ್ ಲೈಸೆನ್ಸ್ ರದ್ದುಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿತ್ತು. ಆದರೆ ಸಂತ್ರಸ್ತೆ ಕುಟುಂಬದ ಮನವಿ ಮೆರೆಗೆ ನಿನ್ನೆ ಉನ್ನಾವ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆರೋಪಿಯ ಶಸ್ತ್ರಾಸ್ತ್ರ ಪರವಾನಗಿ ರದ್ದುಗೊಳಿಸುವಂತೆ ಆದೇಶಿಸಿತ್ತು.
ಇತ್ತೀಚಿಗೆ ರಾಯ್ ಬರೇಲಿ ಜಿಲ್ಲೆಯಲ್ಲಿ ಅತ್ಯಾಚಾರ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿದ್ದು, ಅಪಘತಾದ ಸಂತ್ರಸ್ತೆಯ ಇಬ್ಬರು ಸಂಬಂಧಿಕರು ಮೃತಪಟ್ಟಿದ್ದಾರೆ. ಈ ಸಂಬಂಧ ಕುಲದೀಪ್ ಸಿಂಗ್ ಸೆಂಗರ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.
SCROLL FOR NEXT