ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ರಾಹುಲ್ ಗಾಂಧಿಯವರು ತ್ಯಜಿಸಿದ ನಂತರ ಅವರ ಸ್ಥಾನಕ್ಕೆ ಯಾರಾಗಬೇಕೆಂದು ನಿರ್ಧಾರ ಮಾಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಇದೇ 10ರಂದು ಒಟ್ಟು ಸೇರಿ ತೀರ್ಮಾನಿಸಲಿದೆ.
ಮುಂದಿನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆಗಸ್ಟ್ 10ರಂದು ಬೆಳಗ್ಗೆ 11 ಗಂಟೆಗೆ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಹಿನ್ನಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಕಾಂಗ್ರೆಸ್ ಅಧ್ಯಕ್ಷ ಯಾರು ಎಂಬ ಬಗ್ಗೆ ತೀವ್ರ ಬಿಕ್ಕಟ್ಟು ಪಕ್ಷದಲ್ಲಿ ಎದುರಾಗಿದೆ.
ರಾಹುಲ್ ಗಾಂಧಿಯವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಕೂಡ ಅದು ಸ್ವೀಕಾರವಾಗಿಲ್ಲ.