ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ: ಸ್ವದೇಶಿಸಿ ನಿರ್ಮಿತ ಕ್ವಿಕ್ ರಿಯಾಕ್ಷನ್ ಕ್ಷಿಪಣಿ ಪರೀಕ್ಷೆ ಯಶಸ್ವಿ
ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಇದರ ಮಧ್ಯೆ ಡಿಆರ್ಡಿಒ ಸ್ವದೇಶಿ ನಿರ್ಮಿತ ಕ್ವಿಕ್ ರಿಯಾಕ್ಷನ್ ಸರ್ಫೇಸ್ ಟು ಏರ್ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.
ಬಾಲಸೋರ್: ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಇದರ ಮಧ್ಯೆ ಡಿಆರ್ಡಿಒ ಸ್ವದೇಶಿ ನಿರ್ಮಿತ ಕ್ವಿಕ್ ರಿಯಾಕ್ಷನ್ ಸರ್ಫೇಸ್ ಟು ಏರ್ ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.
ಒಡಿಶಾದ ಚಂಡೀಪುರದಲ್ಲಿರುವ ಪರೀಕ್ಷಾ ಕೇಂದ್ರದಿಂದ ಕ್ಷಿಪಣಿಯನ್ನು ಉಡಾವಣೆ ಮಾಡಲಾಯಿತು. ಬೆಳಗ್ಗೆ 11.5ರ ವೇಳೆಗೆ ಕ್ಷಿಪಣಿ ಉಡಾವಣೆಗೊಂಡಿತು ಎಂದು ಡಿಆರ್ಡಿಒ ಮೂಲಗಳು ತಿಳಿಸಿವೆ.
ಸುಮಾರು 25-30 ಕಿ.ಮೀ ಎತ್ತರಕ್ಕೆ ಚಿಮ್ಮುವ ಸಾಮರ್ಥ್ಯ ಹೊಂದಿರುವ ಈ ಕ್ಷಿಪಣಿಯ ಮೊದಲ ಪರೀಕ್ಷೆ 2017ರ ಜೂನ್ 4ರಂದು ನಡೆದಿತ್ತು. ನಂತರ 2019ರ ಫೆಬ್ರವರಿ 26ರಂದು ಒಂದೇ ದಿನ ಎರಡು ಯಶಸ್ವಿ ಪರೀಕ್ಷೆ ನಡೆಯಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.