ದೇಶ

ಆರ್ಟಿಕಲ್ 370 ರದ್ದು: ಬಿಎಸ್ ಪಿ, ಎಸ್ ಪಿ, ವೈಎಸ್ ಆರ್ ಸಿ ಬೆಂಬಲ!

Srinivas Rao BV
ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370ಯನ್ನು ರದ್ದುಗೊಳಿಸಿರುವ ಮೋದಿ ಸರ್ಕಾರದ ಐತಿಹಾಸಿಕ ನಿರ್ಧಾರಕ್ಕೆ ದೇಶಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. 
ಸಂಸತ್ ನಲ್ಲಿ ಈ ನಿರ್ಧಾರವನ್ನು ಗೃಹ ಸಚಿವ ಅಮಿತ್ ಶಾ ಪ್ರಕಟಿಸುತ್ತಿದ್ದಂತೆಯೇ ಕಾಂಗ್ರೆಸ್, ಪಿಡಿಪಿ ಸದಸ್ಯರು ಕೋಲಾಹಲ ಉಂಟುಮಾಡಿದ್ದರು. ಆದರೆ ಅಚ್ಚರಿಯ ರೀತಿಯಲ್ಲಿ ಮೋದಿ ಸರ್ಕಾರದ ಐತಿಹಾಸಿಕ ನಿರ್ಧಾರಕ್ಕೆ ಎಸ್ ಪಿ, ಬಿಎಸ್ ಪಿ, ವೈಎಸ್ ಆರ್ ಕಾಂಗ್ರೆಸ್ ಬೆಂಬಲ ಸೂಚಿಸಿದ್ದು, ರಾಜ್ಯಸಭೆಯಲ್ಲಿ ಮೋದಿ ಸರ್ಕಾರಕ್ಕೆ ವಿಪಕ್ಷಗಳ ಬೆಂಬಲ ಸಹಾಯಕವಾಗಲಿದೆ. 
ರಾಜ್ಯಸಭೆಯಲ್ಲಿ ಆರ್ಟಿಕಲ್ 370 ರದ್ದತಿ ಮಸೂದೆ ಅಂಗೀಕರಿಸುವುದಕ್ಕೆ ಮೋದಿ ಸರ್ಕಾರಕ್ಕೆ ಬಹುಮತದ ಅಗತ್ಯವಿದೆ. ಕಾಂಗ್ರೆಸ್ ಪಿಡಿಪಿಯನ್ನು ಹೊರತುಪಡಿಸಿದರೆ ಬೇರೆ ಯಾವ ಪಕ್ಷಗಳೂ ಹೆಚ್ಚು ಗದ್ದಲ ಉಂಟು ಮಾಡಿಲ್ಲ. ಈ ನಡುವೆ ಬಿಎಸ್ ಪಿ ಸಂಸದ ಸತೀಶ್ ಚಂದ್ರ ಮಿಶ್ರಾ, ಆರ್ಟಿಕಲ್ 370 ರದ್ದುಗೊಳಿಸುವ ಮಸೂದೆಗೆ ತಮ್ಮ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಘೋಷಿಸಿದ್ದಾರೆ. 
ಈ ನಡುವೆ ಎಸ್ ಪಿ ಬಿಎಸ್ ಪಿ ಸಹ ಬೆಂಬಲ ಸೂಚಿಸಿದ್ದು, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಲು ದಾರಿ ಸುಗಮವಾಗಿದೆ.
SCROLL FOR NEXT