ದೇಶ

ರಾಜ್ಯಸಭೆ ಕಾಂಗ್ರೆಸ್ ಮುಖ್ಯ ಸಚೇತಕ ಭುವನೇಶ್ವರ್ ಕಲಿತ ರಾಜೀನಾಮೆ

Lingaraj Badiger
ನವದೆಹಲಿ: ಕಾಂಗ್ರೆಸ್ ಗೆ ಮತ್ತೊಂದು ಆಘಾತವಾಗಿದ್ದು, ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ಮುಖ್ಯ ಸಚೇತಕ ಭುವನೇಶ್ವರ್ ಕಲಿತ ಅವರು ತಮ್ಮ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಇಬ್ಭಾಗ ಮತ್ತು ಆರ್ಟಿಕಲ್ 370 ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ನಿರ್ಧಾರವನ್ನು ವಿರೋಧಿಸಿ ರಾಜ್ಯಸಭಾ ಸ್ಥಾನಕ್ಕೆ ಕಲಿತ ಅವರು ರಾಜೀನಾಮೆ ನೀಡಿದ್ದಾರೆ.
ಕಲಿತ ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ರಾಜ್ಯಸಭಾ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಅವರು ಘೋಷಿಸಿದ್ದಾರೆ.
ಇದಕ್ಕು ಮುನ್ನ ಸಮಾಜವಾದಿ ಪಕ್ಷದ ಸಂಜಯ್ ಸೇಠ್ ಅವರು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಭುವನೇಶ್ವರ್ ಕಲಿತ ಅವರು ರಾಜೀನಾಮೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370(3)ನೇ ವಿಧಿಯನ್ನು ರದ್ದುಗೊಳಿಸಿ, ಲಡಾಖ್ ಮತ್ತು ಜಮ್ಮು -ಕಾಶ್ಮೀರ ಎಂಬ ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಕ್ಕೆ ಅವಕಾಶ ಮಾಡಿಕೊಡುವ ಕಾಶ್ಮೀರ ಪುನರ್‌ ರಚನೆ ಮಸೂದೆ ಮತಕ್ಕೆ ಹಾಕುವ ಮುನ್ನ ಕಾಂಗ್ರೆಸ್ ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸುವಂತೆ ಕಲಿತ ಅವರಿಗೆ ಸೂಚಿಸಲಾಗಿತ್ತು. ಆದರೆ ಇದು ದೇಶದ ಜನರ ಆಶಯಕ್ಕೆ ವಿರುದ್ಧವಾಗಿದ್ದು, ಈ ಮೂಲಕ ಪಕ್ಷ ವಿನಾಶದತ್ತ ಸಾಗುತ್ತಿದೆ. ಇದಕ್ಕೆ ನಾನು ಕೊಡುಗೆ ನೀಡುವುದಿಲ್ಲ ಎಂದು ಕಲಿತ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
SCROLL FOR NEXT