ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿಧಿವಶ
ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ.
ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ.ಹೃದಯಾಘಾತದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸುಷ್ಮಾ ಸ್ವರಾಜ್(67 ) ಮಂಗಳವಾರ ರಾತ್ರಿ ನಿಧನರಾದರು.
ತಾವು ನಿಧನರಾಗುವ ಮುನ್ನ 370ನೇ ವಿಧಿಯನ್ನು ಹಿಂತೆಗೆದುಕೊಳ್ಳುವ ಕ್ರಮಕ್ಕೆ ಪ್ರಧಾನಿ ಮೋದಿಯವರನ್ನು ಅಭಿನಂದಿಸಿ ಸುಷ್ಮಾ ಸ್ವರಾಜ್ ಅವರು ಇಂದು ಟ್ವೀಟ್ ಮಾಡಿದ್ದರು.
ಬಹುಕಾಲದಿಂದ ಬಿಜೆಪಿಯ ಪ್ರಮುಖ ಮಹಿಳಾ ಮುಖಂಡೆಯಾಗಿದ್ದ ರಾಜ್, ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.
ಕಳೆದ ವರ್ಷ ನವೆಂಬರ್ನಲ್ಲಿ ಅವರು ತಮಗೆ ಅನಾರೋಗ್ಯವಾಗಿರುವ ಕಾರಣ 2019 ರ ಸಾರ್ವತ್ರಿಕ ಚುನಾವಣೆಯಲ್ಲಿಸ್ಪರ್ಧಿಸುವುದಿಲ್ಲ ಎಂದು ಅವರು ಘೋಷಿಸಿದ್ದರು..
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.