ದೆಹಲಿ: ಜೆಎನ್ ಯು ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ; ಐಐಟಿ ಬಳಿ ರಸ್ತೆಗೆ ತಳ್ಳಿದ ಕಾಮುಕ!
ಜೆಎನ್ ಯು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಮೇಲೆ ಕ್ಯಾಬ್ ಡ್ರೈವರ್ ಅತ್ಯಾಚಾರವೆಸಗಿದ್ದು, ರಸ್ತೆ ಮೇಲೆ ಆಕೆಯನ್ನು ತಳ್ಳಿದ್ದಾನೆ.
ನವದೆಹಲಿ: ಜೆಎನ್ ಯು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯ ಮೇಲೆ ಕ್ಯಾಬ್ ಡ್ರೈವರ್ ಅತ್ಯಾಚಾರವೆಸಗಿದ್ದು, ರಸ್ತೆ ಮೇಲೆ ಆಕೆಯನ್ನು ತಳ್ಳಿದ್ದಾನೆ.
ದೆಹಲಿಯ ತನ್ನ ಸ್ನೇಹಿತರ ಮನೆಯಲ್ಲಿ ಹುಟ್ಟುಹಬ್ಬದ ಸಮಾರಂಭವನ್ನು ಮುಕ್ತಾಯಗೊಳಿಸಿ ವಾಪಸ್ಸಾಗಲು ಕಾಯ್ದಿರಿಸಿದ್ದ ಕ್ಯಾಬ್ ನಲ್ಲಿ ಈ ಘಟನೆ ನಡೆದಿದೆ.
’ಜೆಎನ್ ಯು ಗೆ ವಾಪಸ್ಸಾಗುತ್ತಿದ್ದ ಮಾರ್ಗ ಮಧ್ಯದಲ್ಲಿ ಈ ಘಟನೆ ನಡೆದಿದ್ದು, ಅತ್ಯಾಚಾರವೆಸಗಿದ ಬಳಿಕ ಐಐಟಿ-ದೆಹಲಿ ಬಳಿಯ ರಸ್ತೆಯಲ್ಲಿ ತನ್ನನ್ನು ತಳ್ಳಿದ್ದಾನೆ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾಳೆ.
ಚಾಲನೆಯಲ್ಲಿದ್ದ ಕಾರಿನಲ್ಲಿ ಸತತ ಮೂರು ಗಂಟೆಗಳ ಕಾಲ ತನ್ನ ಮೇಲೆ ಅತ್ಯಾಚಾರ ನಡೆದಿದ್ದು, ರಸ್ತೆ ಬದಿಯಲ್ಲಿ ಪ್ರಜ್ಞಾಹೀನ ಸ್ಥಿತಿಒಯಲ್ಲಿ ಪತ್ತೆಯಾಗಿದ್ದಳು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.