ದೇಶ

ಜಮ್ಮು- ಕಾಶ್ಮೀರದಲ್ಲಿ ಸಂಪೂರ್ಣ ಶಾಂತಿಯುತ ಪರಿಸ್ಥಿತಿ: ಪೊಲೀಸರು

Nagaraja AB
ಶ್ರೀನಗರ: ನಿರ್ಭಂಧ ಹಾಗೂ ಬಿಗಿ ಭದ್ರತೆಯ ನಡುವೆಯೂ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಮೂರು ವಲಯಗಳಲ್ಲಿಯೂ ಪರಿಸ್ಥಿತಿ ಸಂಪೂರ್ಣ ಶಾತಿಯುತವಾಗಿರುವುದಾಗಿ ಉನ್ನತ ಪೊಲೀಸ್ ಅಧಿಕಾರಿಗಳು ಇಂದು  ತಿಳಿಸಿದ್ದಾರೆ.
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ  ಸಂವಿಧಾನದ 370 ನೇ ವಿಧಿ ರದ್ದುಗೊಂಡ ನಂತರ ರಾಜ್ಯದಲ್ಲಿ ಎಲ್ಲಿಯೂ ಯಾವುದೇ ರೀತಿಯ ಅಹಿತಕರ ಘಟನೆ ವರದಿಯಾಗಿಲ್ಲ , ಕಾನೂನು ಸುವ್ಯವಸ್ಥೆ ಸಂಪೂರ್ಣ ಶಾಂತಿಯುತವಾಗಿರುವುದಾಗಿ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. 
ಶ್ರೀನಗರದಲ್ಲಿ ಕೆಲ ಪೋನ್ ಗಳು ಹಾಗೂ ಇಂಟರ್ ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದ್ದು, ತುರ್ತು ಕೆಲಸ ಇರುವವರಿಗೆ ನಿರ್ಬಂಧ ಸಡಿಲಗೊಳಿಸಲಾಗಿದೆ ಎಂದು ಶ್ರೀನಗರ ಉಪ ಆಯುಕ್ತ ಶಾಹಿದ್ ಇಕ್ಬಾಲ್ ಚೌದರಿ ತಿಳಿಸಿದ್ದಾರೆ.
ಸೋಮವಾರ ಮಧ್ಯರಾತ್ರಿ ಹಿರಿಯ ಅಧಿಕಾರಿಗಳೊಂದಿಗೆ ಪರಿಸ್ಥಿತಿ ಪರಾಮರ್ಶೆ ನಡೆಸಿದ ಜಮ್ಮು- ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲಿಕ್, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಪರಾಮರ್ಶೆಗಾಗಿ ರಾಜ್ಯಪಾಲರು , ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂಬುದು ರಾಜಭವನ ವಕ್ತಾರರು ತಿಳಿಸಿದ್ದಾರೆ.
SCROLL FOR NEXT