ರಾಹುಲ್ ಗಾಂಧಿ 
ದೇಶ

ಪ್ರವಾಹ ಸಂತ್ರಸ್ತರಿಗೆ ನೆರವಾಗುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ

ನೆರೆಯಿಂದ ಬಾಧಿತವಾಗಿರುವ ಪ್ರದೇಶಗಳ ಕುರಿತು ಕಾಳಜಿ ವ್ಯಕ್ತಪಡಿಸಿರುವ ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿ, ಪ್ರವಾಹದಲ್ಲಿ ಸಿಲುಕಿದವರಿಗೆ ನೆರವು...

ನವದೆಹಲಿ: ನೆರೆಯಿಂದ ಬಾಧಿತವಾಗಿರುವ ಪ್ರದೇಶಗಳ ಕುರಿತು ಕಾಳಜಿ ವ್ಯಕ್ತಪಡಿಸಿರುವ ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿ, ಪ್ರವಾಹದಲ್ಲಿ ಸಿಲುಕಿದವರಿಗೆ ನೆರವು ಒದಗಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, ‘ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗುಜರಾತ್, ಒಡಿಶಾ, ಅಸ್ಸಾಂ ಹಾಗೂ ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಲಕ್ಷಾಂತರ ಜನ ನೆರೆಯಲ್ಲಿ ಸಿಲುಕಿದ್ದಾರೆ ಇಲ್ಲವೆ ಸ್ಥಳಾಂತರಗೊಂಡಿದ್ದಾರೆ. ಆದ್ದರಿಂದ ನಾನು ಎಲ್ಲಾ ನೆರೆ ಪೀಡಿತ ಪ್ರದೇಶಗಳ ಕಾಂಗ್ರೆಸ್ ಕಾರ್ಯಕರ್ತರು ಸಂಕಷ್ಟದಲ್ಲಿರುವರಿಗೆ ಅಗತ್ಯ ನೆರವು ಒದಗಿಸಬೇಕು. ಪ್ರವಾಹ ಪರಿಸ್ಥಿತಿ ಆದಷ್ಟು ಬೇಗ ಸುಧಾರಿಸಲಿ ಎಂದು ಪ್ರಾರ್ಥಿಸುವುದಾಗಿ ’ ತಿಳಿಸಿದ್ದಾರೆ.
ದೇಶದ ಹಲವು ಭಾಗಗಳಲ್ಲಿ ನೆರೆ ಹಾವಳಿಯಾಗಿದ್ದು, ಲಕ್ಷಾಂತರ ಜನರ ಬದುಕನ್ನು ಸಂಕಷ್ಟಕ್ಕೆ ದೂಡಿದೆ. ಜೊತೆಗೆ ಸಾವಿರಾರು ಹೆಕ್ಟೇರ್ ಭೂಮಿ ಜಲಾವೃತಗೊಂಡಿದೆ.
ವರದಿ ಪ್ರಕಾರ, ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ 9 ಜನ ಸಾವನ್ನಪ್ಪಿದ್ದು, ಸುಮಾರು 50 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ.
ಕಳೆದ ವರ್ಷದ ಆಗಸ್ಟ್ ನಲ್ಲಿ ಭಾರಿ ಪ್ರವಾಹಕ್ಕೆ ತುತ್ತಾಗಿದ್ದ ಕೇರಳದಲ್ಲಿ ಈ ವರ್ಷವೂ ಭಾರಿ ಮಳೆ ಹಾಗೂ ನೆರೆ ಆವರಿಸಿದೆ. ರಾಜ್ಯ ಸರ್ಕಾರ ಸಂತ್ರಸ್ತರ ನೆರವಿಗಾಗಿ ಹಲವು ಪುನರ್ವಸತಿ ಕೇಂದ್ರಗಳನ್ನು ಆರಂಭಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!