ದೇಶ

ಅರುಣ್ ಜೇಟ್ಲಿಗೆ ಅನಾರೋಗ್ಯ: ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ-ವೆಂಕಯ್ಯ ನಾಯ್ಡು

Raghavendra Adiga

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶನಿವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿದ್ದು, ಅಲ್ಲಿ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ ನಾಯಕ ಜೇಟ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.

ಮಾಜಿ ವಿತ್ತ ಸಚಿವ ಜೇಟ್ಲಿ ಶುಕ್ರವಾರ ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಜೇಟ್ಲಿ ಚಿಕಿತ್ಸೆ ನಡೆಸುತ್ತಿರುವ ವೈದ್ಯರ ತಂಡದೊಡನೆ ವೆಂಕಯ್ಯ ನಾಯ್ಡು ಸಮಾಲೋಚನೆ ನಡೆಸಿದ್ದಾರೆ.ಜೇಟ್ಲಿಯ ಆರೋಗ್ಯದ ಬಗ್ಗೆ ವಿಚಾರಿಸಿದ ನಾಯ್ಡು ಅವರ ಕುಟುಂಬದ ಸದಸ್ಯರನ್ನು ಸಹ ಭೇಟಿಯಾದರು. ಈ ವೇಳೆ ಜೇಟ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಹೃದಯ ದೌರ್ಬಲ್ಯ, ನ್ನಿಧಾನಗತಿಯ ಎದೆಬಡಿತದ ಕಾರಣ ಏಮ್ಸ್ ಗೆ ದಾಖಲಾಗಿದ್ದ ಜೇಟ್ಲಿ ಅವರನ್ನು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಆರೋಗ್ಯ ಸಚಿವ ಡಾ.ಹರ್ಷವರ್ಧನ್ , ಅಮಿತ್ ಶಾ ಸೇರಿ ಅನೇಕ ನಾಯಕರು ಭೇಟಿಯಾಗಿದ್ದಾರೆ.

SCROLL FOR NEXT