ದೇಶ

ಸಂವಿಧಾನದ ಚೌಕಟ್ಟಿನೊಳಗೆ 370ನೇ ವಿಧಿ ರದ್ದು: ಭಾರತ ಬೆಂಬಲಿಸಿದ ರಷ್ಯಾ

Nagaraja AB

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿ ಜಮ್ಮು- ಕಾಶ್ಮೀರ ಹಾಗೂ ಲಡಾಖ್ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿದ ಭಾರತದ ನಿರ್ಧಾರವನ್ನು ರಷ್ಯಾ ಬೆಂಬಲಿಸಿದೆ.

ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದಂತೆ  ಭಾರತ ಕೈಗೊಂಡ ನಿರ್ಧಾರದಿಂದ ಆ ಭಾಗದಲ್ಲಿ ಭಾರತ ಹಾಗೂ ಪಾಕಿಸ್ತಾನ ಆಕ್ರಮಣಕಾರಿ ನೀತಿ ಅನುಸರಿಸುವುದಿಲ್ಲ ಎಂಬ ನಿರೀಕ್ಷೆಯನ್ನು ಮಾಸ್ಕೊ ಹೊಂದಿರುವುದಾಗಿ ರಷ್ಯಾ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯಿಸಿದೆ.

ಭಾರತ ಸಂವಿಧಾನದ ಚೌಕಟಿನೊಳಗೆ ಜಮ್ಮು- ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಲಾಗಿದೆ. ಇದರಿಂದಾಗಿ ಉಭಯ ದೇಶಗಳ ನಡುವಣ ಯಾವುದೇ ರೀತಿಯ ಯುದ್ಧದಂತ ಮನೋಭಾವ ಉಂಟಾಗುವುದಿಲ್ಲ ಎಂದು ಭರವಸೆ ಹೊಂದಿರುವುದಾಗಿ ತಿಳಿಸಿದೆ. 

ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಬಂಧವನ್ನು ಸುಧಾರಿಸುವ ನಿಟ್ಟಿನಲ್ಲಿ ರಷ್ಯಾ ನಿರಂತರವಾಗಿ ಬೆಂಬಲಿಸುತ್ತಾ ಬಂದಿದೆ. 1972ರ ಶಿಮ್ಲಾ ಒಪ್ಪಂದ ಹಾಗೂ 1999ರ ಲಾಹೋರ್ ಘೋಷಣೆಯಂತೆ ಪರಸ್ಪರ ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದೆ.

SCROLL FOR NEXT