ಸಾಂದರ್ಭಿಕ ಚಿತ್ರ 
ದೇಶ

ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿಯಿಂದ ಈದ್‌ ಶುಭ ಹಾರೈಕೆ

ರಾಷ್ಟ್ರಪತಿ ರಾಮನಾಥ್ ಕೋವಿಂದ್‌, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈದ್ ಅಲ್-ಅಧಾ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿ...

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್‌, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈದ್ ಅಲ್-ಅಧಾ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿ, ಮಾನವೀಯತೆ ಪ್ರೀತಿ, ಭ್ರಾತೃತ್ವ ಮತ್ತು ಸೇವೆಯನ್ನು ಈ ಹಬ್ಬ ಸಂಕೇತಿಸುತ್ತದೆ ಎಂದಿದ್ದಾರೆ.

ದೇಶದ ಎಲ್ಲ ನಾಗರಿಕರಿಗೆ, ವಿಶೇಷವಾಗಿ ಭಾರತ ಮತ್ತು ವಿದೇಶದಲ್ಲಿರುವ ಮುಸ್ಲಿಂ ಸಹೋದರ ಸಹೋದರಿಯರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿರುವ ಕೋವಿಂದ್, ಈದ್‌ ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯ ಸೇವೆಯನ್ನು ಸಂಕೇತಿಸುತ್ತದೆ. ನಮ್ಮ ಸಂಯೋಜಿತ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ವತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗಿರೋಣ ಎಂದು ಕರೆ ನೀಡಿದ್ದಾರೆ.

ಈದ್‌ ಅಧಾಕ್ಕೆ ಶುಭ ಕೋರಿ ಟ್ವೀಟ್‌ ಮಾಡಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಈದ್‌-ಉಲ್-ಅಧಾನ ಉದಾತ್ತ ಆದರ್ಶಗಳು ನಮ್ಮ ಜೀವನವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಸಮೃದ್ಧಗೊಳಿಸಲಿ ಮತ್ತು ದೇಶಕ್ಕೆ ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ.

ಈ ಹಬ್ಬವು ಭಕ್ತಿ, ನಂಬಿಕೆ ಮತ್ತು ತ್ಯಾಗದ ಸದ್ಗುಣಗಳಿಗೆ ಒಂದು ಸಂಕೇತವಾಗಿದೆ ಮತ್ತು ಸಹೋದರತ್ವ, ಸಹಾನುಭೂತಿ ಮತ್ತು ಐಕ್ಯತೆಯ ಭಾವನೆಗಳನ್ನು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ, ಈದ್ ಉಲ್-ಅಧಾ ಸಂದರ್ಭದಲ್ಲಿ ದೇಶಕ್ಕೆ ನನ್ನ ಶುಭಾಶಯಗಳು. ಇದು ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷದ ಮನೋಭಾವವನ್ನು ಹೆಚ್ಚಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಈದ್ ಮುಬಾರಕ್ ಎಂದು ಶುಭ ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT