ಕಚ್ ಗಡಿಯಲ್ಲಿ ತೀವ್ರ ಶೋಧ 
ದೇಶ

ಗುಜರಾತ್ ಗಡಿ ಮೂಲಕ ಉಗ್ರ ಪ್ರವೇಶ ಕುರಿತ ಗುಪ್ತಚರ ಇಲಾಖೆ ಎಚ್ಚರಿಕೆ, ತೀವ್ರ ಕಟ್ಟೆಚ್ಚರ

ಗುಜರಾತ್ ಸಮುದ್ರ ಮಾರ್ಗವಾಗಿ ಪಾಕಿಸ್ತಾನದ ಮೂಲದ ಉಗ್ರರು ಭಾರತ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಸಂಬಂಧ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಅಹ್ಮದಾಬಾದ್: ಗುಜರಾತ್ ಸಮುದ್ರ ಮಾರ್ಗವಾಗಿ ಪಾಕಿಸ್ತಾನದ ಮೂಲದ ಉಗ್ರರು ಭಾರತ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಸಂಬಂಧ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಗುಜರಾತ್ ಕಚ್ ಬಂದರು ಪ್ರದೇಶದ ಮೂಲಕವಾಗಿ ಪಾಕಿಸ್ತಾನ ಮೂಲದ ಸುಮಾರು 8-10 ಮಂದಿ ಉಗ್ರರು ಪ್ರತ್ಯೇಕ ತಂಡಗಳಾಗಿ ಭಾರತ ಪ್ರವೇಶ ಮಾಡಲು ಸಿದ್ಧತೆ ನಡೆಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಗುಜರಾತ್ ಪೊಲೀಸರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಹೀಗಾಗಿ ಗುಜರಾತ್ ತೀರದಾದ್ಯಂತ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದು, ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಿದ್ದಾರೆ ಎಂದು ತಿಳಿದುಬಂದಿದೆ.

ಅಂತೆಯೇ ಪ್ರತೀ 2 ಗಂಟೆಗೆ ಒಮ್ಮೆ ಸಮುದ್ರ ಮಾರ್ಗದಲ್ಲಿ ಸಂಚರಿಸುವ ಎಲ್ಲ ರೀತಿಯ ಪ್ರಯಾಣಿಕ ಮತ್ತು ಸರಕು ಸಾಗಾಣಿಕಾ ಹಡಗುಗಳನ್ನು ತೀವ್ರ ಶೋಧ ನಡೆಸಿದ್ದಾರೆ. ಈ ಸಂಬಂಧ ನೌಕೆ ಮತ್ತು ಗಡಿ ಭದ್ರತಾ ಪಡೆಗಳು ಜಂಟಿಯಾಗಿ ಶೋಧ ಕಾರ್ಯದಲ್ಲಿ ತೊಡಗಿವೆ ಎಂದು ತಿಳಿದುಬಂದಿದೆ.

ಈ ಕುರಿತು ಮಾತನಾಡಿರುವ ಪೂರ್ವ ಕಚ್ ಭಾಗದ ಎಸ್ ಪಿ ಪರೀಕ್ಷಿತಾ ರಾಥೋಡ್ ಅವರು, ಉಗ್ರರು ಕಚ್ ಮೂಲಕ ಭಾರತ ಪ್ರವೇಶಿಸುವ ಕುರಿತು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ನಾವು ಕೂಡ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಹೆಚ್ಚುವರಿ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿದ್ದೇವೆ. ಬಂದರು ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಿದ್ದು, ಯಾವುದೇ ರೀತಿಯ ಶಂಕಿತ ವ್ಯಕ್ತಿ, ಬೋಟ್ ಕಾಣಿಸಿಕೊಂಡರೆ ಕೂಡಲೇ ಮಾಹಿತಿ ನೀಡುವಂತೆ ಸ್ಥಳೀಯ ಮೀನುಗಾರರಿಗೆ ಸಂದೇಶ ಕೂಡ ರವಾನಿಸಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT