ದೇಶ

ಸಂವಿಧಾನದ 370ನೇ ವಿಧಿ ರದ್ದತಿ ಮೂಲಕ ಸರ್ದಾರ್ ವಲ್ಲಭಬಾಯ್ ಪಟೇಲ್ ಕನಸು ನನಸು- ಪ್ರಧಾನಿ

ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಸ್ವಾತಂತ್ರ್ಯ ಭಾರತದ ಮೊದಲ ಗೃಹ ಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಕನಸನ್ನು ನನಸು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಸ್ವಾತಂತ್ರ್ಯ ಭಾರತದ ಮೊದಲ ಗೃಹ ಮಂತ್ರಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಕನಸನ್ನು ನನಸು ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

 ಕೆಂಪುಕೋಟೆಯಲ್ಲಿಂದು 73ನೇ ಸ್ವಾತಂತ್ಸೋವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಹೊಸ ಸರ್ಕಾರ  ಅಧಿಕಾರಕ್ಕೆ ಬಂದು ಇನ್ನೂ 10 ವಾರಗಳು ಪೂರ್ಣಗೊಂಡಿಲ್ಲ. ಆದರೆ, ಈ ಕಿರು ಅವಧಿಯಲ್ಲಿಯೇ ಅನೇಕ ಪ್ರಮುಖವಾದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.  ಸಂವಿಧಾನದ 370 ನೇ ವಿಧಿ, ತ್ರಿವಳಿ ತಲಾಖ್ ಪದ್ದತಿಗೆ ಅಂತ್ಯ ಹಾಡಲಾಗಿದೆ ಎಂದು ತಿಳಿಸಿದರು.

370ನೇ ವಿಧಿಯಿಂದಾಗಿ ಜಮ್ಮು- ಕಾಶ್ಮೀರ ಹಾಗೂ ಲಡಾಖ್ ನಲ್ಲಿ ಭ್ರಷ್ಟಾಚಾರ, ಭಯೋತ್ಪಾದನೆ ಹೆಚ್ಚಾಗಿತ್ತು. ಮಹಿಳೆಯರು, ಮಕ್ಕಳು, ದೀನ ದಲಿತರ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು. ನೈರ್ಮಲ್ಯೀಕರಣ ವ್ಯವಸ್ಥೆ ಎಂಬುದೇ ಇರಲಿಲ್ಲ ಇದನ್ನು ಹೇಗೆ ಒಪ್ಪಿಕೊಳ್ಳಲಿ ಎಂದು ಪ್ರಶ್ನಿಸಿದ ಮೋದಿ, 370ನೇ ವಿಧಿಯನ್ನು ಸಮರ್ಥಿಸಿಕೊಳ್ಳುವವರು ತಮ್ಮನ್ನು ತಾವೇ ಪ್ರಶ್ನಿಸಿಕೊಳ್ಳಬೇಕಾಗಿದೆ. ಅಂತಿಮವಾಗಿ ಬಹುಮತದೊಂದಿಗೆ ಈ ವಿಧಿಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು.


ದೇಶದಲ್ಲಿನ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಪ್ರವಾಹ  ಕುರಿತು ಕಳವಳ ವ್ಯಕ್ತಪಡಿಸಿ, ರಕ್ಷಾ ಬಂಧನ್ ಹಬ್ಬದ ಶುಭಾಶಯ ಕೋರುತ್ತಾ ಭಾಷಣ ಆರಂಭಿಸಿದ ಮೋದಿ, ಪ್ರವಾಹ ಪೀಡಿತ ಜನರ ಸಂಕಷ್ಟದಲ್ಲಿ  ಎಲ್ಲರೂ ಒಗ್ಗೂಡಬೇಕಾಗಿದೆ ಎಂದರು. 

ಜನಸಂಖ್ಯಾ ಹೆಚ್ಚಳದಿಂದ ಮುಂದಿನ ಪೀಳಿಗೆಗೆ ತೊಂದರೆಯಾಗಲಿದೆ. ಸಣ್ಣ ಕುಟುಂಬದ ನೀತಿ ಅನುಕರಣೆಯಿಂದ ದೇಶದ ಅಭಿವೃದ್ಧಿ ಹಾಗೂ ದೇಶಭಕ್ತಿ ಹೆಚ್ಚಾಗಲಿದೆ. ಭ್ರಷ್ಟಾಚಾರ, ಕಪ್ಪು ಹಣ ತೊಡೆದುಹಾಕುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕಾಗಿದೆ ಎಂದು ಮೋದಿ ಕರೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ