ಚಿದಂಬರಂ 
ದೇಶ

ಪ್ರಧಾನಿ ಮೋದಿಯನ್ನು ಹಾಡಿಹೊಗಳಿದ ಕಾಂಗ್ರೆಸ್ ನಾಯಕ ಚಿದಂಬರಂ!

ಸದಾ ಒಂದಲ್ಲ ಒಂದು ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ಮಾಡುತ್ತಲೇ ಬರುತ್ತಿರುವ ಕಾಂಗ್ರೆಸ್  ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ  ಪಿ ಚಿದಂಬರಂ ಈಗ ಅವರನ್ನು ಹಾಡಿ ಹೊಗಳಿದ್ದಾರೆ.!

ನವದೆಹಲಿ: ಸದಾ ಒಂದಲ್ಲ ಒಂದು ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ಮಾಡುತ್ತಲೇ ಬರುತ್ತಿರುವ ಕಾಂಗ್ರೆಸ್  ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ  ಪಿ ಚಿದಂಬರಂ ಈಗ ಅವರನ್ನು ಹಾಡಿ ಹೊಗಳಿದ್ದಾರೆ.!
 
ಇದು ಅಚ್ಚರಿ ಎನಿಸಿದರೂ ಸತ್ಯ .!  ನಂಬಲೇಬೇಕು.  ಕಾರಣವಿಷ್ಟೆ ನಿನ್ನೆ ದಿನ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಿಂದ ಮಾಡಿದ ಭಾಷಣದ ಮೂರು ಸಂಗತಿಯನ್ನೂ ಅವರು ಮೆಚ್ಚಿಕೊಂಡಿದ್ದಾರೆ. ಜನಸಂಖ್ಯಾ ನಿಯಂತ್ರಣ, ಪ್ಲಾಸ್ಟಿಕ್ ನಿರ್ಮೂಲನೆ ಮತ್ತು ಸಂಪತ್ತು ಸೃಷ್ಟಿಸುವವರನ್ನು ಗೌರವಿಸಬೇಕು ಎಂಬ ಮೋದಿ ಅವರ  ವಿಚಾರಧಾರೆಗಳನ್ನು ಚಿದಂಬರಂ ಮೆಚ್ಚಿ, ಗುಣಗಾನ ಮಾಡುವುದರ ಜೊತೆಗೆ   ಬಹಿರಂಗವಾಗಿ ಸ್ವಾಗತಿಸಿದ್ದಾರೆ.
 
ದೇಶದ ಪ್ರಗತಿಗೆ ಜನಸಂಖ್ಯಾ ನಿಯಂತ್ರಣ ಮಾಡುವುದು, ಇಂದಿನ ತುರ್ತು ಅಗತ್ಯವಾಗಿದೆ. ಈ ವಿಚಾರದಲ್ಲಿ ಮೋದಿ ಅವರ ನಿಲುವು ಅತ್ಯಂತ ಸಮಂಜಸ ಮತ್ತು ಸಕಾಲಿಕವಾಗಿದೆ ಎಂದು ಚಿದಂಬರಂ ಗುಣಗಾನ ಮಾಡಿದ್ದಾರೆ.

ಅದೇ ರೀತಿ ಪ್ಲಾಸ್ಟಿಕ್ ನಿರ್ಮೂಲನೆ ಮಾಡುವ ಬಗ್ಗೆಯೂ ಮೋದಿ ಅವರ ಹೇಳಿಕೆ ಸಮಂಜಸವಾಗಿದೆ. ಭವಿಷ್ಯದ ದೃಷ್ಟಿಕೋನ ಮತ್ತು ಪರಿಸರ ಸಂರಕ್ಷಣೆ, ಸಮತೋಲವನ್ನು ಗಮನದಲ್ಲಿಟ್ಟುಕೊಂಡು ಮುಂದೆ ಆಗಬಹುದಾದ ಅಪಾಯ ತಡೆಗಟ್ಟುವ ವಿಚಾರದಲ್ಲಿ ಅವರ ಈ ಹೇಳಿಕೆ ಸಕಾಲಿಕವಾಗಿದೆ. ದೇಶ ಪ್ಲಾಸ್ಟಿಕ್ ಪಿಡುಗಿನಿಂದ ಮುಕ್ತಿ ಹೊಂದಬೇಕಾಗಿದೆ ಎಂದು ಪ್ರಧಾನಿ ಅವರ ವಿಚಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಪತ್ತು ಸೃಷ್ಟಿಸುವವರನ್ನು ಗೌರವಿಸಬೇಕು ಎಂಬ ಮೋದಿ ಅವರ ನಿಲುವೂ ಕೂಡ ಸಮಂಜಸವಾಗಿದೆ. ದೇಶದ ಪ್ರಗತಿಯಲ್ಲಿ ಉದ್ಯಮಿಗಳ ಪಾತ್ರ ಬಹಳ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ದೇಶದ ಅಭಿವೃದ್ಧಿಗೆ ಕಾರಣವಾಗುವ ಜನರನ್ನು ಗೌರವಿಸಬೇಕಾಗಿರುವುದು ಎಲ್ಲರ ಹೊಣೆಯಾಗಿದೆ. ಈ  ವಿಚಾರಗಳಲ್ಲಿ ಮೋದಿ ಅವರ ದೃಷ್ಟಿಕೋನ, ನಿಲುವು ಸರಿಯಾಗಿದೆ ಎಂದು  ಚಿದಂಬರಂ ಸರಣಿ ಟ್ವೀಟ್ ಮೂಲಕ  ಹೊಗಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ಯುದ್ಧದ ಎಫೆಕ್ಟ್: ಅಮೆರಿಕದ ಶಸ್ತ್ರಾಸ್ತ್ರ ದಾಸ್ತಾನು ಖಾಲಿ? ರಕ್ಷಣಾ ಕಂಪನಿಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ಹೆಚ್ಚಿಸಲು ಪೆಂಟಗನ್ ಸೂಚನೆ

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಜಾರ್ಖಂಡ್ JSSC 2024 ಪ್ರಶ್ನೆಪತ್ರಿಕೆ ಸೋರಿಕೆ: 120 ಉತ್ತರಗಳು, WhatsApp ಮೂಲಕ ಸೋರಿಕೆ; CID ಸ್ಫೋಟಕ ವರದಿ

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ