ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರಿಗೆ ಗೌರವ ನಮನ 
ದೇಶ

ಅಟಲ್ ಬಿಹಾರಿ ವಾಜಪೇಯಿ ಮೊದಲ ಪುಣ್ಯತಿಥಿ; ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಬಿಜೆಪಿ ನಾಯಕರಿಂದ ಗೌರವ ನಮನ 

ಶುಕ್ರವಾರ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಮೊದಲ ಪುಣ್ಯತಿಥಿ. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಇಂದು ಬೆಳಗ್ಗೆ ದೆಹಲಿಯ ಅಟಲ್ ಸ್ಮಾರಕ ಸದೈವ್ ಅಟಲ್ ಗೆ ತೆರಳಿ ಗೌರವ ನಮನ ಸಲ್ಲಿಸಿದರು. 

ನವದೆಹಲಿ: ಶುಕ್ರವಾರ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಮೊದಲ ಪುಣ್ಯತಿಥಿ. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಇಂದು ಬೆಳಗ್ಗೆ ದೆಹಲಿಯ ಅಟಲ್ ಸ್ಮಾರಕ ಸದೈವ್ ಅಟಲ್ ಗೆ ತೆರಳಿ ಗೌರವ ನಮನ ಸಲ್ಲಿಸಿದರು.


ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪಕ ಸದಸ್ಯ ಹಾಗೂ ಹಿರಿಯ ನಾಯಕರಾದಿದ್ದ ಅಟಲ್ ಬಿಹಾರಿ ವಾಜಪೇಯಿಯವರು ಕಳೆದ ವರ್ಷ ಆಗಸ್ಟ್ 16ರಂದು ಸುದೀರ್ಘ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ತಮ್ಮ 93ನೇ ವಯಸ್ಸಿನಲ್ಲಿ ನಿಧನರಾಗಿದ್ದರು. 


ಹಲವು ನಾಯಕರು ದಿವಂಗತ ವಾಜಪೇಯಿ ಅವರ ಸಮಾಧಿಗೆ ಪುಷ್ಪಗುಚ್ಛ ಅರ್ಪಿಸಿ ಗೌರವ ಸಲ್ಲಿಸಿರು. 1996ರಲ್ಲಿ 13 ದಿನಗಳ ಕಾಲ ವಾಜಪೇಯಿ ಅವರು ಬಿಜೆಪಿಯ ಮೊದಲ ಪ್ರಧಾನ ಮಂತ್ರಿಯಾಗಿದ್ದರು. ನಂತರ 1998 ಮತ್ತು 2004ರ ನಡುವೆ ಪ್ರಧಾನಿಯಾಗಿದ್ದರು.
ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಮತ್ತು ಬಿಜೆಪಿ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಕೂಡ ವಾಜಪೇಯಿ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.ಇಂದಿನ ಪ್ರಾರ್ಥನಾ ಸಭೆಯಲ್ಲಿ ಅಟಲ್ ಅವರ ದತ್ತುಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಮತ್ತು ಮೊಮ್ಮಗಳು ನಿಹಾರಿಕಾ ಉಪಸ್ಥಿತರಿದ್ದರು. 


ಸ್ಮಾರಕದ ಬಳಿಕ ಭಕ್ತಿ ಗೀತೆಗಳನ್ನು ಹಾಡಲಾಯಿತು, ಪ್ರತಿಯೊಬ್ಬರೂ ಅಗಲಿದ ನಾಯಕನನ್ನು ಸ್ಮರಿಸಿದರು. ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ, ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ, ಇತರ ಬಿಜೆಪಿ ನಾಯಕರು ಕೂಡ ಗೌರವ ಸಲ್ಲಿಸಿದ್ದಾರೆ.
ಅಗಲಿದ ನಾಯಕನಿಗೆ ಅವರೇ ಬರೆದಿದ್ದ ಕವನವನ್ನು ಉಲ್ಲೇಖಿಸಿ ಬಿಜೆಪಿ ಟ್ವೀಟ್ ಮಾಡಿ ಗೌರವ ಸಲ್ಲಿಸಿದೆ.


"ಭಾರತವು ಕೇವಲ ಭೂಮಿ ಅಥವಾ ಗಡಿ ಇರುವ ರಾಷ್ಟ್ರವಲ್ಲ, ಅದು ಜೀವಂತ ರಾಷ್ಟ್ರೀಯವಾದಿ ಆತ್ಮ" ಎಂದು ಟ್ವೀಟ್ ಮಾಡಿದೆ.
ಪಕ್ಷದ ಅಧಿಕೃತ ಟ್ವಿಟ್ಟರ್ ನಲ್ಲಿ ವಾಜಪೇಯಿ ಅವರು ತಮ್ಮ ವೃತ್ತಿಜೀವನದಲ್ಲಿ ಬರೆದ ಇತರ ಕವಿತೆಗಳನ್ನು ಉಲ್ಲೇಖಿಸಲಾಗಿದೆ.


ಬಿಜೆಪಿಯ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಅವರು ಪೂರ್ಣ ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸಿದ ಮೊದಲ ಕಾಂಗ್ರೆಸ್‌ಯೇತರ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.


ಅಟಲ್ ಬಿಹಾರಿ ವಾಜಪೇಯಿಯವರ ಹುಟ್ಟಿದ ದಿನವಾದ ಡಿಸೆಂಬರ್ 25ನ್ನು ಬಿಜೆಪಿ ಉತ್ತಮ ಆಡಳಿತ ದಿನವಾಗಿ ಆಚರಿಸುತ್ತಿದೆ. 2014ರಲ್ಲಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT