ದೇಶ

ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ಬಿಜೆಪಿ ನಾಯಕರ ಭೇಟಿ 

Sumana Upadhyaya

ನವದೆಹಲಿ: ಕೇಂದ್ರ ಸರ್ಕಾರದ ಮಾಜಿ ಹಣಕಾಸು ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರನ್ನು ನಿನ್ನೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೊದಲಾದವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ ಅರುಣ್ ಜೇಟ್ಲಿಯವರ ಆರೋಗ್ಯದ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ಇಂದು ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ಭೇಟಿ ಕೊಡಲಿದ್ದಾರೆ. 


ಆಸ್ಪತ್ರೆಯ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವಿಶೇಷ ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ಕ್ಷಣ ಕ್ಷಣದ ತಪಾಸಣೆ ಮತ್ತು ಜಾಗ್ರತೆ ವಹಿಸುತ್ತಿದ್ದಾರೆ.ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿದ್ದಾರೆ. 
ಆಗಸ್ಟ್ 10ರ ನಂತರ ಆಸ್ಪತ್ರೆಯಿಂದ ಅವರ ಆರೋಗ್ಯದ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

SCROLL FOR NEXT