ದೇಶ

ಅರುಣ್ ಜೇಟ್ಲಿ ಆರೋಗ್ಯ ಮತ್ತಷ್ಟು ಗಂಭೀರ, ಕೃತಕ ಉಸಿರಾಟ ವ್ಯವಸ್ಥೆ ಅಳವಡಿಕೆ

Lingaraj Badiger

ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಮತ್ತು ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಜೇಟ್ಲಿ ಅವರನ್ನು ಉಸಿರಾಟ ತೊಂದರೆಯ ಕಾರಣದಿಂದ ಆಗಸ್ಟ್ 9 ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲಗಳ ಪ್ರಕಾರ ಜೇಟ್ಲಿ ಅವರ ಶ್ವಾಸಕೋಶದಲ್ಲಿ ನೀರು ತುಂಬಿದ್ದು, ಈ ಕಾರಣದಿಂದ ಅವರಿಗೆ ಉಸಿರಾಡಲು ಸಮಸ್ಯೆಯಾಗುತ್ತಿದೆ. ಶ್ವಾಸಕೋಶದಿಂದ ನೀರನ್ನು ಹೊರತೆಗೆಯಲಾಗುತ್ತಿದ್ದರೂ, ಮರಳಿ ತುಂಬಿಕೊಳ್ಳುತ್ತಿದೆ. ಹೀಗಾಗಿ ಅವರ ಸ್ಥಿತಿ ಚಿಂತಾಜನಕವಾಗಿದೆ. ಅವರು Soft tissue sarcoma (ಒಂದು ರೀತಿಯ ಕ್ಯಾನ್ಸರ್) ದಿಂದ ಬಳಲುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿನ್ನೆಯಷ್ಟೇ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏಮ್ಸ್ ಗೆ ಭೇಟಿ ನೀಡಿ ಮಾಜಿ ಸಚಿವರ ಆರೋಗ್ಯ ಸ್ಥಿತಿ ವಿಚಾರಿಸಿದ್ದರು.

SCROLL FOR NEXT