ದೇಶ

2ನೇ ವಿವಾಹಕ್ಕೆ ಮಕ್ಕಳಿಂದ ಅಡ್ಡಿ: 75 ವರ್ಷದ ವಯೋವೃದ್ಧ ಆತ್ಮಹತ್ಯೆ

ಎರಡನೇ ಮದುವೆಯಾಗಲು ಮಕ್ಕಳಿಂದ ಅಡ್ಡಿಯಾದ್ದರಿಂದ ಮನನೊಂದು 75 ನೇ ವರ್ಷದ ವಯೋವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೈಲಿಯಲ್ಲಿ ನಡೆದಿದೆ.

ಬರೈಲಿ: ಎರಡನೇ ಮದುವೆಯಾಗಲು ಮಕ್ಕಳಿಂದ ಅಡ್ಡಿಯಾದ್ದರಿಂದ ಮನನೊಂದು 75 ನೇ ವರ್ಷದ ವಯೋವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೈಲಿಯಲ್ಲಿ ನಡೆದಿದೆ.

ಕಾನ್ಷಿರಾಮ್ ಕಾಲೋನಿಯ ನಿವಾಸಿ ಅರ್ಷದ್  ಆತ್ಮಹತ್ಯೆ ಮಾಡಿಕೊಂಡ ವಯೋವೃದ್ಧ. ಇವರ ಹೆಂಡತಿ ಮೃತಪಟ್ಟಿದ್ದರಿಂದ ಎರಡನೇ ಮದುವೆಯಾಗಲು ನಿರ್ಧರಿಸಿದ್ದರು. ಆದರೆ,  ವಿವಾಹಕ್ಕೆ ಮಕ್ಕಳಿಂದ ಅಡ್ಡಿಯುಂಟಾದ ಹಿನ್ನೆಲೆಯಲ್ಲಿ ಮನೆಯಲ್ಲಿ ಪ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಂದೆಯ ಎರಡನೇ ವಿವಾಹದ ವಿಷಯ ತಿಳಿದ ಮಕ್ಕಳು, ಇದರಿಂದಾಗಿ ಕುಟುಂಬದ ಮಾನ ಹೋಗುತ್ತದೆ ಎಂದು ಗುರುವಾರ ಜಗಳವಾಡಿದ್ದಾರೆ. ಇದರಿಂದಾಗಿ ಆತ  ಮನನೊಂದು ಶುಕ್ರವಾರ ನೇಣಿಗೆ ಶರಣಾಗಿದ್ದಾರೆ. ಮೃತಪಟ್ಟ ಅರ್ಷದ್ ಅವರಿಗೆ ಐವರು ಮಕ್ಕಳು ಹಾಗೂ ಮೂವರು ಹೆಣ್ಣುಮಕ್ಕಳಿದ್ದಾರೆ. ಹೆಣ್ಣು ಮಕ್ಕಳಿಗೆ ವಿವಾಹವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಅರ್ಷದ್ ಆತ್ಮಹತ್ಯೆ ಮಾಡಿಕೊಂಡಿರುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!